ಬೆಂಗಳೂರು : ಪಾಂಡಿಚೆರಿ ಮತ್ತು ತಮಿಳುನಾಡು ಸರ್ಕಾರಗಳು ಕಾಟನ್ ಕ್ಯಾಂಡಿ (ಬಾಂಬೆ ಮಿಠಾಯಿ ) ಉತ್ಪಾದನೆ ಮತ್ತು ಮಾರಾಟ ನಿಷೇಧಿಸಿದ ಬೆನ್ನಲ್ಲೇ ಕರ್ನಾಟಕದಲ್ಲೂ ಕೂಡ ಬಾಂಬೆ ಮಿಠಾಯಿ ಬ್ಯಾನ್ ಮಾಡಲು ಮುಂದಾಗಿದೆ. ಅದೇ ರೀತಿ ಗೋಬಿಮಂಚೂರಿ ಕೂಡ ಕರ್ನಾಟಕದಲ್ಲಿ ಇನ್ಮುಂದೆ ಬ್ಯಾನ್ ಆಗಲಿದೆಯಂತೆ.
ಬಾಂಬೆ ಮಿಠಾಯಿ ಮಕ್ಕಳ ಅಚ್ಚುಮೆಚ್ಚಿನ ತಿನಿಸಾಗಿದ್ದು, ಜಾತ್ರೆ ಸೇರಿದಂತೆ ಹಲವು ಕಡೆ ಇದನ್ನು ಮಾರಾಟ ಮಾಡಲಾಗುತ್ತದೆ. ಉದ್ದನೆಯ ಕೋಲಿಗೆ ಬಾಂಬೆ ಮಿಠಾಯಿಯನ್ನು ಸೆಕ್ಕಿಸಿಕೊಂಡು ಬೀದಿ ಬೀದಿಗಳಲ್ಲಿ ಮಾರಾಟ ಮಾಡುವುದನ್ನ ನಾವು ನೋಡುತ್ತಿರುತ್ತೇವೆ. ಇನ್ನೂ, ರಸ್ತೆ ಬದಿ ಮಾಡಿ ಕೊಡುವ ಗೋಬಿ ಮಂಚೂರಿ ಮಕ್ಕಳಿಂದ ಹಿಡಿದು ವೃದ್ದರವರೆಗೆ ಭಾರಿ ಅಚ್ಚುಮೆಚ್ಚು ಆದರೆ ಗೋಬಿ ಮಂಚೂರಿಯಲ್ಲಿ Sunset Yellow ಹಾಗೂ Tartrazine ಹಾನಿಕಾರಕ ಅಂಶ ಇರೋದ್ರಿಂದ ಎರಡೂ ರಾಸಾಯನಿಕ ಅಂಶಗಳನ್ನು ಬಳಕೆ ಮಾಡದೇ ಇರುವ ಬಗ್ಗೆ ಆರೋಗ್ಯ ಸಚಿವರು ಘೋಷಣೆ ಮಾಡಲಿದ್ದಾರೆ.
ರೊಡಮೈನ್ ಬಿ ಸೇವನೆಯಿಂದ ಕ್ಯಾನ್ಸರ್ ಬರುವ ಸಾಧ್ಯತೆಗಳಿದ್ದು, ಕಣ್ಣು ದೃಷ್ಟಿ ಸಮಸ್ಯೆ ಹಾಗೂ ಲಿವರ್ ಸಂಬಂಧಿ ಸಮಸ್ಯೆ ಎದುರಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಮಾ 11 ರಂದು ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿ ನಿಷೇಧ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.