Home ತಾಜಾ ಸುದ್ದಿ BIG NEWS ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಬ್ಯಾನ್, ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಸುವಂತಿಲ್ಲ- ಸಚಿವ...

BIG NEWS ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಬ್ಯಾನ್, ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಸುವಂತಿಲ್ಲ- ಸಚಿವ ದಿನೇಶ್​ ಗುಂಡೂರಾವ್

0

ಬೆಂಗಳೂರು: ರಾಜ್ಯಾದ್ಯಾಂತ ಅಪಾಯಕಾರಿಯಾದ ಬಣ್ಣಯುಕ್ತ ಕಾಟನ್ ಕ್ಯಾಂಡಿ ಬ್ಯಾನ್ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಹೇಳಿದ್ದಾರೆ.

ಈ ಬಗ್ಗೆ ಇಂದು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ.ಆದರೆ ಗೋಬಿ ಮಂಚೂರಿಗೆ ನಿರ್ಬಂಧ ಹೇರುವಂತಿಲ್ಲ. ಒಂದು ವೇಳೆ ನಿಯಮ ಮೀರಿ, ಕೃತಕ ಬಣ್ಣ ಬಳಸಿದರೆ ಆಹಾರ ಸುರಕ್ಷಿತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 59ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಹತ್ತು ಲಕ್ಷ ದಂಡ ಹಾಗೂ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ ಎಂದು ತಿಳಿಸಿದ್ದಾರೆ.

ವಿವಿಧ ಕಡೆಗಳಲ್ಲಿ ಎರಡು ಪದಾರ್ಥಗಳಲ್ಲಿನ ಸ್ಯಾಂಪಲ್‌ಗಳನ್ನು ಸಂಗ್ರಹಿಸಲಾಗಿದ್ದು, ಇವುಗಳಲ್ಲಿ ವಿಷಕಾರಿ ಅಂಶಗಳು ಪತ್ತೆಯಾಗಿದ್ದು, ಇದರಿಂದ ಇದರ ಸೇವನೆ ಮಾಡುವುದು ಯೋಗ್ಯವಲ್ಲ. ಟಾರ್ಟ್ರಾಜಿನ್, ಸನ್​ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್​ನಂತ ಕೃತಕ ಬಣ್ಣಗಳನ್ನು ಬಳಸಲಾಗಿದೆ ಇವು ಆರೋಗ್ಯಕ್ಕೆ ತುಂಬಾ ಅಪಾಯಕಾರಿಯಾಗಿದೆ. ಇವುಗಳಿಂದ ಕ್ಯಾನ್ಸರ್ ಹಾಗೂ ಅಸಾಂಕ್ರಮಿಕ ಖಾಯಿಲೆ ಹೆಚ್ಚಳವಾಗುತ್ತಿದೆ.

ಕಾಟನ್ ಕ್ಯಾಂಡಿಯಲ್ಲಿ ಪಿಂಕ್ ಕಲರ್ ಬರಲು ರೊಡಮೈನ್ ಬಿ ಬಳಸುತ್ತಾರೆ. ಇದನ್ನು ಇನ್ಮುಂದೆ ಬಳಸುವಂತಿಲ್ಲ.ಈಗ ನಮ್ಮ ಆರೋಗ್ಯ ಇಲಾಖೆಯ ಆಯುಕ್ತರು ಕೂಡ ಸುತ್ತೋಲೆ ಹೊರಡಿಸುತ್ತಾರೆ. ಅದನ್ನು ಬಳಕೆ ಮಾಡುವಂತಿಲ್ಲ. ಬಳಕೆ ಮಾಡಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here