Home ತಾಜಾ ಸುದ್ದಿ ವಾಹನ ಸವಾರರಿಗೆ ಗುಡ್ ನ್ಯೂಸ್ : ಪೆಟ್ರೋಲ್- ಡೀಸೆಲ್ ಬೆಲೆ ಇಳಿಕೆ

ವಾಹನ ಸವಾರರಿಗೆ ಗುಡ್ ನ್ಯೂಸ್ : ಪೆಟ್ರೋಲ್- ಡೀಸೆಲ್ ಬೆಲೆ ಇಳಿಕೆ

0

ವದೆಹಲಿ: ಮೇ ತಿಂಗಳ ಲೋಕಸಭೆ ಚುನಾವಣೆಗೆ ಮುನ್ನ ಕೇಂದ್ರ ಸರ್ಕಾರ ದೇಶದ ಜನತೆಗೆ ಬೆಲೆ ಏರಿಕೆಯ ತತ್ತರದಿಂದ ಕೊಂಚ ನಿರಾಳತೆ ಎನಿಸುವ ಸುದ್ದಿ ನೀಡಿದ್ದು, ದೇಶಾದ್ಯಂತ ಇಂದು ಶುಕ್ರವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 2 ರೂಪಾಯಿ ಇಳಿಕೆಯಾಗಿದೆ.

ಬೆಲೆ ಇಳಿಕೆಯಿಂದ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕ್ರಮವಾಗಿ ಲೀಟರ್‌ಗೆ 94.72 ಮತ್ತು 87.62 ರೂಪಾಯಿಯಾಗಿದ್ದು, ವ್ಯಾಟ್( VAT), ಸ್ಥಳೀಯ ಶುಲ್ಕಗಳಾದ ಸೆಸ್ ಮತ್ತು ಸರಕು ಸಾಗಣೆ ಶುಲ್ಕಗಳಲ್ಲಿನ ವ್ಯತ್ಯಾಸದಿಂದಾಗಿ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಿಂದ ಜನತೆಗೆ ಅನುಕೂಲವಾಗಲಿದೆ. ಇದರಿಂದ ಗ್ರಾಹಕರ ಪೆಟ್ರೋಲ್, ಡೀಸೆಲ್ ಬಳಕೆ ಕೂಡ ಹೆಚ್ಚಾಗಿ ದೇಶದಲ್ಲಿ ಪ್ರವಾಸೋದ್ಯಮವನ್ನು, ಲಾಜಿಸ್ಟಿಕ್ಸ್, ಉತ್ಪಾದನೆ ಮತ್ತು ಚಿಲ್ಲರೆ ವಲಯಗಳ ಲಾಭದಾಯಕತೆ ಹೆಚ್ಚಾಗುತ್ತದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಈಗ ಲೀಟರ್‌ಗೆ 96.72 ರೂ.ಗೆ ಹೋಲಿಸಿದರೆ ಲೀಟರ್‌ಗೆ 94.72 ರೂ ಆಗಿದ್ದು, ಡೀಸೆಲ್ ಪ್ರತಿ ಲೀಟರ್‌ಗೆ 87.62 ರೂ.ಗೆ ಮಾರಾಟವಾಗಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿನ ಕಡಿತವು ಡೀಸೆಲ್ ಮೂಲಕ ಚಲಿಸುವ 58 ಲಕ್ಷಕ್ಕೂ ಹೆಚ್ಚು ಭಾರೀ ಸರಕುಗಳ ವಾಹನಗಳು, 6 ಕೋಟಿ ಕಾರುಗಳು ಮತ್ತು 27 ಕೋಟಿ ದ್ವಿಚಕ್ರ ವಾಹನಗಳಲ್ಲಿ ಚಲಿಸುವ ಗ್ರಾಹಕರ ವೆಚ್ಚವನ್ನು ತಗ್ಗಿಸಲಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಟ್ವೀಟ್ ಮೂಲಕ ತಿಳಿಸಿದೆ.

LEAVE A REPLY

Please enter your comment!
Please enter your name here