Home ತಾಜಾ ಸುದ್ದಿ ಕಾರಿಗೆ ಬೆಂಕಿ ಹಚ್ಚಿ ಯುವಕನ ಭೀಕರ ಹತ್ಯೆ

ಕಾರಿಗೆ ಬೆಂಕಿ ಹಚ್ಚಿ ಯುವಕನ ಭೀಕರ ಹತ್ಯೆ

0

ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ತೋಗರ್ಸಿ ಬಳಿ, ಶಿವಮೊಗ್ಗದ ಯುವಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದ್ದು, ಇಂದು ಈ ವಿಚಾರ ಬೆಳಕಿಗೆ ಬಂದಿದೆ. ಇಲ್ಲಿನ ತೋಗರ್ಸಿ ಹೊರವಲಯದ ಸ್ಮಶಾನದ ಬಳಿ ಈ ಘಟನೆ ನಡೆದಿದ್ದು, ಶಿವಮೊಗ್ಗದ ಗಾಡಿಕೊಪ್ಪದ ಮೈಸೂರು ಬೀದಿ ನಿವಾಸಿ ವೀರೇಶ್ (27) ಎಂಬ ಯುವಕನೇ ಭೀಕರವಾಗಿ ಹತ್ಯೆಗೀಡಾದವ ಎಂದು ತಿಳಿದು ಬಂದಿದೆ. ಯುವಕ ವೀರೇಶ್ ನನ್ನು ಆತನ ಕಾರಿನಲ್ಲೇ ಕೂಡಿ ಹಾಕಿ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ.

ಆತ ಕೊಂಡೊಯ್ದಿದ್ದ ಇನ್ನೋವಾ ಕಾರಿನ ಡಿಕ್ಕಿಯಲ್ಲಿ, ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಹಂತಕರು ಕಾರಿಗೆ ಬೆಂಕಿ ಹಚ್ಚಿ ಸುಟ್ಟಿರುವುದರಿಂದ ದೇಹವು ಸಂಪೂರ್ಣ ಸುಟ್ಟು ಕರಕಲಾಗಿದೆ. ಶುಕ್ರವಾರ ರಾತ್ರಿ ಗಾಡಿಕೊಪ್ಪದ ಮನೆಯಲ್ಲಿದ್ದ ಯುವಕನಿಗೆ, ಕೆಲ ಪರಿಚಿತರು ಆತನಿ ಕರೆ ಮಾಡಿದ್ದರು ಎನ್ನಲಾಗಿದ್ದು, ಸ್ನೇಹಿತರೋರ್ವರ ಇನ್ನೋವಾ ಕಾರಿನಲ್ಲಿ ವೀರೇಶ್ ತೆರಳಿದ್ದರು. ಬಳಿಕ ಮನೆಗೆ ಹಿಂದಿರುಗಿರಲಿಲ್ಲ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಶಿಕಾರಿಪುರ ಡಿವೈಎಸ್‌ಪಿ ಕೇಶವ್, ಇನ್ಸ್’ಪೆಕ್ಟರ್ ರುದ್ರೇಶ್, ಶಿರಾಳಕೊಪ್ಪ ಠಾಣೆ ಸಬ್ ಇನ್ಸ್’ಪೆಕ್ಟರ್ ರಮೇಶ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಆರೋಪಿಗಳ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.

LEAVE A REPLY

Please enter your comment!
Please enter your name here