Home ಕರಾವಳಿ ಮಂಗಳೂರು: ಕೋಕೆನ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರು: ಕೋಕೆನ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್

0

ಮಂಗಳೂರು: ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 35 ಗ್ರಾಂ ಕೋಕೆನ್ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಧಿತರನ್ನು ಮಂಗಳೂರಿನ ಸದಕತ್.ಯು ಆಲಿಯಾಸ್ ಶಾನ್ ನವಾಜ್(31), ಮಹಮ್ಮದ್ ಅಶ್ಫಕ್ ಆಲಿಯಾಸ್ ಅಶ್ಫಾ(25) ಎಂದು ಗುರುತಿಸಲಾಗಿದೆ.


ಆರೋಪಿಗಳು ಮಂಗಳೂರು ನಗರಕ್ಕೆ ಗೋವಾ ರಾಜ್ಯದಿಂದ ನಿಷೇದಿತ ಮಾದಕ ವಸ್ತುವಾದ ಕೋಕೆನ್ ನ್ನು ಖರೀದಿಸಿಕೊಂಡು ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತರಪಿಂದ ರೂ. 2,72,000/- ರೂ ಮೌಲ್ಯದ 35 ಗ್ರಾಂ ನಿಷೇಧಿತ ಮಾದಕ ವಸ್ತು ಕೋಕೆನ್, 3 ಮೊಬೈಲ್ ಫೋನ್ ಗಳನ್ನು, ಡಿಜಿಟಲ್ ತೂಕ ಮಾಪಕ, ನಗದು ರೂ. 5560/-ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 4,00,000/- ಆಗಿರುತ್ತದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಗಳಿಬ್ಬರೂ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಗೋವಾ ರಾಜ್ಯದಿಂದ ಕೋಕೆನ್ ನ್ನು ಖರೀದಿಸಿಕೊಂಡು ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಗಳ ಪೈಕಿ ಸದಕತ್.ಯು @ ಶಾನ್ ನವಾಜ್ ಎಂಬಾತನ ವಿರುದ್ದ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ಹಾಗೂ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ.

LEAVE A REPLY

Please enter your comment!
Please enter your name here