Home ಕರಾವಳಿ ಕಡಬ: ಮಗು ಮೃತ್ಯು- ಮಾನಸಿಕವಾಗಿ ನೊಂದು ಮಹಿಳೆ ಆತ್ಮಹತ್ಯೆ..!

ಕಡಬ: ಮಗು ಮೃತ್ಯು- ಮಾನಸಿಕವಾಗಿ ನೊಂದು ಮಹಿಳೆ ಆತ್ಮಹತ್ಯೆ..!

0

ಕಡಬ: ಎದೆಹಾಲು ಉಣಿಸುವ ವೇಳೆ ತನ್ನ ಹೆಣ್ಣು ಮಗು ಆಕಸ್ಮಿಕವಾಗಿ ಮೃತಪಟ್ಟ ಕಾರಣದಿಂದ ಮಾನಸಿಕವಾಗಿ ನೊಂದ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದಿಂದ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಕಡಬ ತಾಲೂಕು ರಾಮಕುಂಜ ಗ್ರಾಮದ ಶ್ರೀಮತಿ ವನಿತಾ (38) ಎಂದು ಗುರುತಿಸಲಾಗಿದೆ. ವನಿತಾ ಅವರಿಗೆ ಮೂರು ವರ್ಷದ ಗಂಡು ಮಗು ಇದ್ದು, ಮೂರು ತಿಂಗಳ ಹಿಂದೆ 2ನೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಮಗುವಿಗೆ ಎದೆ ಹಾಲು ಉಣಿಸುವ ಸಮಯದಲ್ಲಿ ಹೆಣ್ಣು ಮಗುವು ಆಕಸ್ಮಿಕವಾಗಿ ಮೃತಪಟ್ಟಿತ್ತು ಎನ್ನಲಾಗಿದೆ. ಈ ವಿಚಾರವಾಗಿ ಮಾನಸಿಕವಾಗಿ ನೊಂದುಕೊಂಡು ಖಿನ್ನತೆಗೊಳಗಾದ ಕಾರಣ ಚಿಕಿತ್ಸೆಕೊಡಿಸುವ ಸಲುವಾಗಿ ಪತಿ ತಾಯಿ ಮನೆಯಾದ ರಾಮಕುಂಜದಲ್ಲಿ ಬಿಟ್ಟು ಹೋಗಿದ್ದರು. ಎ.2ರಂದು ಮನೆ ಮಂದಿ ಹೊರಗೆ ಹೋಗಿದ್ದ ವೇಳೆ ಮನೆಯ ಒಳಗಿನ ಕೋಣೆಯ ಮರದ ಅಡ್ಡಕ್ಕೆ ಸೀರೆಯನ್ನು ಕಟ್ಟಿ ಇನ್ನೊಂದು ತುದಿಯನ್ನು ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಮೃತರ ತಮ್ಮ ದಿವಾಕರ ಕೆ ಎಂಬವರು ನೀಡಿದ ಕಡಬ ಪೊಲೀಸ್‌‌ ಠಾಣಾ ಯು ಡಿ ಆರ್‌ ನಂಬ್ರ 11/2024 ಕಲಂ:174 (3)&(i) ಸಿ ಆರ್‌ ಪಿ ಸಿ ಯಂತೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here