Home ತಾಜಾ ಸುದ್ದಿ ನೀತಿ ಸಂಹಿತೆ ಉಲ್ಲಂಘನೆ: ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌ ಜಾರಿ

ನೀತಿ ಸಂಹಿತೆ ಉಲ್ಲಂಘನೆ: ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌ ಜಾರಿ

0

ಬೆಂಗಳೂರು:  ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ.ಕೋಟಾ ಶ್ರೀನಿವಾಸ ಪೂಜಾರಿ, ಗುರುಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.


ಮಾರ್ಚ್ 30 ರಂದು ಕಠಪಾಡಿ ಖಾಸಗಿ ಕಾಲೇಜು ಅವರಣದಲ್ಲಿ ಶ್ರೀನಿವಾಸ ಪೂಜಾರಿ ಪ್ರಚಾರ ಭಾಷಣ ಮಾಡಿದ್ದರು. ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೆ ರಾಜಕೀಯ ಭಾಷಣ ಮಾಡಿದ ಹಿನ್ನಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಕೋರ್ಟ್‌ಗೆ ಖಾಸಗಿ ದೂರು ದಾಖಲಿಸಲಾಗಿತ್ತು. ಈ ದೂರಿನ ಹಿನ್ನೆಲೆಯಲ್ಲಿ ಕೋರ್ಟ್‌ ಸಮನ್ಸ್‌ ಜಾರಿ ಮಾಡಿ ಮೇ 27ಕ್ಕೆ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ಕೋರ್ಟ್  ಆದೇಶ ಹೊರಡಿಸಿದೆ.

LEAVE A REPLY

Please enter your comment!
Please enter your name here