ಮಂಗಳೂರು : ಲೋಕಸಭಾ ಚುನಾವಣೆ 2024ಕ್ಕೆ ನೀತಿ ಸಂಹಿತೆ ಜಾರಿಯಲ್ಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳು 90,443 ಲೀಟರ್‌ಗಳಷ್ಟು ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ನೀತಿ ಸಂಹಿತೆ ಜಾರಿಯಾದಾಗಿನಿಂದ 1,95,47,179 ರೂಪಾಯಿ ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದ್ದರೆ, ಏ.3 ರಂದು 8,69,950 ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.
ಈ ವರೆಗೆ 278 ಎಫ್ಐಆರ್ ದಾಖಲಾಗಿದೆ. ರಾಜ್ಯದಲ್ಲಿ ಲೋಕಸಭೆಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಏ.26 ರಂದು ಮೊದಲ ಹಂತದಲ್ಲಿ ನಡೆದರೆ ಮೇ.7 ರಂದು 2 ನೇ ಹಂತದಲ್ಲಿ ಮತದಾನ ನಡೆಯಲಿದೆ.ರಾಷ್ಟ್ರೀಯ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಎನ್‌ಜಿಆರ್‌ಎಸ್) ಮೂಲಕ ಜಿಲ್ಲೆಯಲ್ಲಿ ಒಟ್ಟು 92 ದೂರುಗಳು ಬಂದಿದ್ದು, ಅವುಗಳಲ್ಲಿ 90 ಅನ್ನು ಪರಿಣಾಮಕಾರಿಯಾಗಿ ಪರಿಹರಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿಯೂ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.