Home ಕರಾವಳಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ : ಮುಖ್ಯ ಶಿಕ್ಷಕ, ಅರ್ಚಕ ಬಂಧನ..!!

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ : ಮುಖ್ಯ ಶಿಕ್ಷಕ, ಅರ್ಚಕ ಬಂಧನ..!!

0
ಕಾರ್ಕಳ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಮುಖ್ಯ ಶಿಕ್ಷಕನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬೋಳ ವಂಜಾರಕಟ್ಟೆ ನಿವಾಸಿ ಬರಬೈಲು ಶಾಲೆಯ ಮುಖ್ಯ ಶಿಕ್ಷಕ ಹಾಗೂ ವಂಜಾರಕಟ್ಟೆ ಇಟ್ಟೋಡಿ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ರಾಜೇಂದ್ರ ಆಚಾರ್ (58) ಬಂಧಿತ ಆರೋಪಿ.
ಈತ ಪ್ರಾಥಮಿಕ ಶಾಲೆಯ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಅನೇಕ ದೂರಿಗಳಿದ್ದು, ಊರವರು ಕೂಡಾ ಆತನಿಗೆ ಬುದ್ದಿವಾದ ಹೇಳಿದ್ದರು ಎನ್ನಲಾಗಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಅಪ್ರಾಪ್ತ ವಯಸ್ಸಿನ ಹಲವು ವಿದ್ಯಾರ್ಥಿನಿಯರಿಂದ ದೂರು ಪಡೆದುಕೊಂಡಿದ್ದು, ಈ ಬಗ್ಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ಬಳಿಕ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here