Home ತಾಜಾ ಸುದ್ದಿ ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ; ಶಂಕಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ ಎನ್‌ಐಎ

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ; ಶಂಕಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ ಎನ್‌ಐಎ

0

ಬೆಂಗಳೂರು: ರಾಜಧಾನಿಯ ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌ ಪ್ರಕರಣದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಂಧಿತರಾಗಿರುವ ಶಂಕಿತರ ಉಗ್ರರನ್ನು ಎನ್‌ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಕೋಲ್ಕತ್ತಾದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಶಂಕಿತರಾದ ಅಬ್ದುಲ್‌ ಮತೀನ್‌ ತಾಹ, ಮುಸಾವಿರ್‌ ಹುಸೇನ್‌ನನ್ನು ಎನ್‌ಐಎ ಪೊಲೀಸರು ಕರೆತಂದರು. ಇಬ್ಬರನ್ನೂ ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ.


ಬಾಂಬ್ ಬ್ಲಾಸ್ಟ್ ಕೇಸಲ್ಲಿ ಬಂಧಿತರಾಗಿರುವ ಮುಜಾಮಿಲ್ ಶರೀಫ್‌, ಮಾಜ್ ಮಾನಿರ್ ಹೇಳಿಕೆ ಅಧರಿಸಿ ವಿಚಾರಣೆ ನಡೆಸಲಾಗುವುದು. ರಾಮೇಶ್ವರಂ ಬಾಂಬ್ ಸ್ಫೋಟ ಕೇಸಲ್ಲಿ ಯಾರ‍್ಯಾರ ಪಾತ್ರ ಏನಿತ್ತು? ಈ ಕೃತ್ಯದ ಹಿಂದೆ ಬೇರೆ ಯಾರೆಲ್ಲಾ ಇದ್ದಾರೆ? ರಾಮೇಶ್ವರಂ ಕೆಫೆಯಲ್ಲೇ ಬಾಂಬ್ ಬ್ಲಾಸ್ಟ್ ಮಾಡಿದ ಉದ್ದೇಶವೇನು? ಬೇರೆ ಎಲ್ಲೆಲ್ಲಿ ವಿಧ್ವಂಸಕ ಕೃತ್ಯವೆಸಗಲು ಪ್ಲಾನ್ ಮಾಡಲಾಗಿತ್ತು ಎಂಬ ಅಂಶಗಳು ಸೇರಿದಂತೆ ನಾನಾ ದೃಷ್ಟಿಕೋನದಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಭದ್ರತಾ ದೃಷ್ಟಿಯಿಂದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಿರುವ ಅಧಿಕಾರಿಗಳು, 14 ದಿನ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲು ತಯಾರಿ ನಡೆಸಿದ್ದಾರೆ.

LEAVE A REPLY

Please enter your comment!
Please enter your name here