ಪುತ್ತೂರು: ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇನ್ನಷ್ಡು ಗ್ಯಾರಂಟಿಗಳು ಅನುಷ್ಟಾನಗೊಳ್ಳಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ಬೆಟ್ಟಂಪಾಡಿ ಗ್ರಾಮದ ರೆಂಜದಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಈ ದೇಶವನ್ನು 60 ವರ್ಷಗಳ ಕಾಲ ಆಳಿ ಸಾಕಷ್ಟು ಅಭಿವೃದ್ದಿ ಕೆಲಸವನ್ನು ಮಾಡಿ ದೇಶವನ್ನು ಅಭಿವೃದ್ದಿಯತ್ತ ಕೊಂಡೊಯ್ದಿತ್ತು ಆದರೆ ಕಳೆದ ಹತ್ತು ವರ್ಷ ಆಡಳಿತ ಮಾಡಿದವರು ಎಲ್ಲವನ್ನೂ ಲಗಾಡಿ ತೆಗೆದಿದ್ದಾರೆ.
ಕಾಂಗ್ರೆಸ್ ಸರಕಾರ ಇದ್ದಾಗ ಜನ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದರು ಆ ಬಳಿಕ ಕಳೆದ ಹತ್ತು ವರ್ಷಗಳಿಂದ ದೇಶದ ಜನತೆ ತತ್ತರಿಸಿದ್ದಾರೆ. ಬೆಲೆ ಏರಿಕೆ ,ಪೆಟ್ರೋಲ್ ಬೆಲೆ ಏರಿಕೆ, ಕೃಷಿ ಪರಿಕರಗಳ ಬೆಲೆ ಏರಿಕೆ ಇವೆಲ್ಲವುಗಳಿಂದ ಜನ ಒಪ್ಪೊತ್ತಿನ ಊಟಕ್ಕೂ ಕಷ್ಡ ಪಡುವ ಸ್ಥಿತಿ ನಿರ್ಮಾಣವಾಗಿದೆ. ಜನರ ಸಂಕಷ್ಡ ಕಂಡ ಕರ್ನಾಟಕದ ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿಯನ್ನು ಜಾರಿ ಮಾಡಿದೆ. ಗ್ಯಾರಂಟಿಯಿಂದಾಗಿ ಕರ್ನಾಟಕದ ಪ್ರತೀಯೊಂದು ಕುಟುಂಬವೂ ನಿಟ್ಟುಸಿರು ಬಿಡುವಂತಾಗಿದೆ ಎಂದು ಹೇಳಿದರು.
ಹಸಿವು ನೀಗಿಸಿದ್ದೇವೆ: ಬೆಂಬಲಿಸಿ
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಜನತೆಹ ಹಸಿವು ನೀಗಿಸುವ ಕರಲಸವನ್ನು ಮಾಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಕೆಪಿಸಿಸಿ ಸಂಯೋಕರಾದ ಕಾವು ಹೇಮನಾಥ ಶೆಟ್ಟಿ ಮಾತನಾಡಿ ದೇಶ ಉಳಿಯಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂಬುದು ಜನತೆಗೆ ಅರಿವಾಗಿದೆ. ಒಬ್ಬ ವ್ಯಕ್ತಿಯ ಹಸರು ಹೇಳಿ ವೋಟು ಕೇಳುವ ಬಿಜೆಪಿಗೆ ಅಭಿವೃದ್ದಿ ಗೊತ್ತೇ ಇಲ್ಲ ಎಂದು ಹೇಳಿದರು.
ವೇದಿಕೆಯಲ್ಲಿ ಬ್ಲಾಕ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ಮೌರಿಶ್ ಮಸ್ಕರೇನಸ್, ಮುರಳೀಧರ್ ರೈ ಮಟಂತಬೆಟ್ಟು, ವಲಯ ಅಧ್ಯಕ್ಷ ನವೀನ್ ರೈ ಚೆಲ್ಯಡ್ಕ, ಕೃಷ್ಣಪ್ರಸಾದ್ ಆಳ್ವ,ಹರೀಶ್ ಕೋಟ್ಯಾನ್, ಮೊದಲಾದವರು ಉಪಸ್ಥಿತರಿದ್ದರು.