ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ, ಅಮೃತ ಮಾಲಾ, ಸಾಗರಮಾಲ ಅಂತಹ ಯೋಜನೆಗಳು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಕಾಲದಲ್ಲಿ ಬಿಡುಗಡೆಯಾದ ಅನುದಾನದಿಂದಾಗಿ ಕರಾವಳಿ ಭಾಗದ ಅಭಿವೃದ್ಧಿಯನ್ನು ಕಾಣಬಹುದಾಗಿದೆ ಎಂದು ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಅವೈಜ್ಞಾನಿಕ ಹೊಸ ನೊಂದಣೆ ಶುಲ್ಕ ಹಾಗೂ ಮಾರ್ಗಸೂಚಿದರದಲ್ಲಿ ಹೆಚ್ಚಳ ಸೇರಿದಂತೆ ಜನವಿರೋಧಿ ನಿರ್ಧಾರಗಳಿಂದಾಂಗಿ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಅಭಿವೃದ್ಧಿ ಕೆಲಸಗಳು ಸ್ಥಗಿತವಾಗಿದ್ದು, ರಾಜ್ಯ ಸರ್ಕಾರ ತನ್ನ ಬಜೆಟ್ ಘೋಷಿಸಿದ ಅನೇಕ ಯೋಜನೆಗಳನ್ನು ಅನುಷ್ಠಾನ ಮಾಡಲು, ಅಭಿವೃದ್ಧಿ ಕಾರ್ಯಗಳಿಗೆ ಅಡಿಗಲ್ಲು ಸಹ ಹಾಕಲು ಸರ್ಕಾರದಲ್ಲಿ ಹಣವಿಲ್ಲದೆ ದಿವಾಳಿಯಾಗಿದೆ. ಲೋಕಸಭಾ ಚುನಾವಣೆಯ ನಂತರದಲ್ಲಿ ರಾಜ್ಯ ಸರ್ಕಾರ ಜನರಿಗೆ ಕೊಡುತ್ತಿರುವ ಯೋಜನೆಗಳು ಸ್ಥಗಿತವಾಗಬಹುದು ಎಂಬ ಅನುಮಾನ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ನೀಡುತ್ತಿರುವ 6000ರೂಗಳ ಜೊತೆಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ರೈತರಿಗೆ ಕೊಡಮಾಡುತ್ತಿದ್ದ 4000ರೂಗಳ ಸಹಾಯ ಧನದ ನೆರವನ್ನು ನಿಲ್ಲಿಸಿರುವ ರಾಜ್ಯ ಸರ್ಕಾರ, ರಾಜ್ಯಾಧ್ಯಂತ ಬರ ಪರಿಸ್ಥಿತಿ ಎದುರಿಸುತ್ತಿರುವ ರೈತರಿಗೆ ಹೊಸ ಸಾಲವನ್ನೂ ನೀಡದೇ ಜನತೆಗೆ ದ್ರೋಹಮಾಡಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಅತಿ ಹೆಚ್ಚು ಜಿಲ್ಲೆಗಳಲ್ಲಿ ಬರ ಪರಿಸ್ಥಿತ ತಾಂಡವಾಡುತ್ತಿದ್ದು, ಕುಡಿಯುವ ನೀರಿಗೆ ಹಾಹಾಕಾರದಿಂದಾಗಿ ಜನರು ತತ್ತರಿಸಿಹೋಗಿದ್ದಾರೆ, ಕುಡಿಯುವ ನೀರಿನ ಬವಣೆ ನೀಗಿಸಲು ಸರ್ಕಾರದಲ್ಲಿ ಹಣವಿಲ್ಲ, ಸಂಕಷ್ಟ ಎದುರಿಸುತ್ತಿರುವ ಜನರಿಗೆ ಸ್ಪಂದಿಸದೆ ಚುನಾವಣಾ ಪ್ರಕ್ರಿಯೆಯಲ್ಲಿ ನಿರತವಾಗಿದೆ ಎಂದರು.
ಕರಾವಳಿ ಪ್ರದೇಶದ ಮೀನುಗಾರ ಮಹಿಳೆಯರಿಗೆ ಘೋಷಿಸಿದ್ದ 1ಲಕ್ಷ ರೂಗಳ ಬಡ್ಡಿರಹಿತ ಸಾಲ ನೀಡದೇ ರಾಜ್ಯ ಸರ್ಕಾರ ಮಹಿಳೆಯರನ್ನು ವಂಚಿಸಿದೆ, ದಕಿಣ ಕನ್ನಡ ಜಿಲ್ಲೆಯ ಜನತೆ ಸ್ವಾಭಿಮಾನಿಗಳು, ದೇಶದ ಭದ್ರತೆ ಹಾಗೂ ಅಭಿವೃದ್ಧಿಯ ಕಾರಣಕ್ಕಾಗಿ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿ ಸರ್ಕಾರವನ್ನು ಬೆಂಬಲಿಸುತ್ತಾ ಬಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಈ ಭಾರಿ ಬಿಜೆಪಿಯ ಸುಶಿಕ್ಷಿತ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರ ಗೆಲುವಿಗೆ ಆಶೀರ್ವದಿಸಲಿದ್ದಾರೆ ಎಂಬ ವಿಶ್ವಾಸವ್ಯಕ್ತಪಡಿಸಿದರು.