Home ಉಡುಪಿ ಅರಬ್ಬೀ ಸಮುದ್ರದಲ್ಲಿ ದೋಣಿ ಮುಳುಗಡೆ, 4 ಮೀನುಗಾರರ ರಕ್ಷಣೆ

ಅರಬ್ಬೀ ಸಮುದ್ರದಲ್ಲಿ ದೋಣಿ ಮುಳುಗಡೆ, 4 ಮೀನುಗಾರರ ರಕ್ಷಣೆ

0

ಭಟ್ಕಳ: ಕರಾವಳಿ ಜಿಲ್ಲೆ ಉತ್ತರ ಕನ್ನಡ ಭಾಗದಲ್ಲಿ ಅಬ್ಬರದ ಗಾಳಿ ಜೊತೆ ಗುಡುಗು ಸಹಿತ ಮಳೆ ಸುರಿಯುತ್ತಿದ್ದು, ಈ ಮಧ್ಯೆ ಭಟ್ಕಳ ಸಮೀಪ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದೆ.


ಅರಬ್ಬೀ ಸಮುದ್ರದಲ್ಲಿ ಗಾಳಿ ಮಳೆಗೆ ಈ ಮೀನುಗಾರಿಕಾ ಬೋಟ್  ಶನಿವಾರ ಬೆಳಗ್ಗೆ ಮುಳುಗಡೆಯಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.  ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ‘ಓಂ ಮಹಾಗಣಪತಿ’ ಹೆಸರಿನ ಬೋಟ್ ಮುಳುಗಡೆಯಾಗಿದೆ. ಬೋಟ್​ನಲ್ಲಿದ್ದ 4 ಮಂದಿ ಮೀನುಗಾರರ ರಕ್ಷಣೆ ಮಾಡಲಾಗಿದೆ. ಮುಳುಗಡೆಯಾಗಿರುವ ಬೋಟ್, ಮಹಾದೇವ ಖಾರ್ವಿ ಎಂಬವರಿಗೆ ಸೇರಿದ್ದಾಗಿದೆ. ಮುಂಜಾನೆ 5 ಗಂಟೆಯ ವೇಳೆಗೆ 4 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಆದರೆ, ಅರಬ್ಬೀ ಸಮದ್ರದಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಕಾಣಿಸಿಕೊಂಡ ಭಾರೀ ಗಾಳಿಮಳೆಗೆ ಬೋಟ್ ಸಂಪೂರ್ಣ ಮುಳುಗಡೆಯಾಗಿದೆ. ಕೂಡಲೇ ಸ್ಥಳದಲ್ಲಿದ್ದ ಇನ್ನೊಂದು ಬೋಟ್‌ನವರು ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ದುರ್ಘಟನೆಯಿಂದ ಬೋಟ್ ಮಾಲಕರಿಗೆ ಲಕ್ಷಾಂತರ ರೂ. ನಷ್ಟವಾಗಿದೆ.

LEAVE A REPLY

Please enter your comment!
Please enter your name here