ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆ ಮಾಡಿ ಮತದಾನ ಮಾಡುವ ಫೊಟೋ ಕ್ಲಿಕ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ.



ಪುತ್ತೂರಿನ ಮತಗಟ್ಟೆಯೊಂದರಲ್ಲಿ ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಯುವಕನೋರ್ವ ಗ್ರೂಪ್ ಗೆ ಶೇರ್ ಮಾಡಿದ್ದಾನೆ. ರಂಜಿತ್ ಬಂಗೇರ ಎಂಬ ಯುವಕನಿಂದ ಈ ಕೃತ್ಯ ನಡೆದಿದ್ದು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನ ತೆಗೆದು ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊ ಮಾಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಪ್ರಕರಣ ದಾಖಲು ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

