ಹುಬ್ಬಳ್ಳಿ: ನೇಹಾ ಹಿರೇಮಠ್ ಹತ್ಯೆ ಪ್ರಕರಣದ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕರೆತಂದಿದ್ದ ಅನ್ಯಕೋಮಿನ ಯುವಕನಿಗೆ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.



ಹುಬ್ಬಳ್ಳಿಯ ಗಬ್ಬೂರನಲ್ಲಿ ಅನ್ಯಕೋಮಿನ ಯುವಕನ ಜತೆ ಬಾಲಕಿ ಇದ್ದಳು. ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಬಾಲಕಿಯನ್ನು ಯುವಕ ಕರೆತಂದಿದ್ದ. ಗಬ್ಬೂರ ಹೋಟೆಲ್‌ನಲ್ಲಿ ಇದ್ದವನನ್ನು ಗಮನಿಸಿ ಸ್ಥಳೀಯರು ಪೊಲೀಸ್ ಸ್ಟೇಷನ್‌ಗೆ ಕರೆದೊಯ್ದಿದ್ದಾರೆ. ಈ ವೇಳೆ ಹಿಂದು ಜಾಗರಣಾ ವೇದಿಕೆ ಮುಖಂಡರು, ಯುವಕನಿಗೆ ಥಳಿಸಿ, ಹುಬ್ಬಳ್ಳಿಯ ಬೇಂಡಿಗೇರಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಅಪ್ರಾಪ್ತ ಬಾಲಕಿ ಕಾಣೆಯಾಗಿರುವ ಕುರಿತು ಕೇಸ್ ದಾಖಲಾಗಿತ್ತು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

