Home ತಾಜಾ ಸುದ್ದಿ ಕೋವಿಶೀಲ್ಡ್‌ ಲಸಿಕೆ ಅಡ್ಡಪರಿಣಾಮ ಬೀರಬಹುದು: ನಿಜ ಒಪ್ಪಿಕೊಂಡ ಅಸ್ಟ್ರಾಜೆನೆಕಾ

ಕೋವಿಶೀಲ್ಡ್‌ ಲಸಿಕೆ ಅಡ್ಡಪರಿಣಾಮ ಬೀರಬಹುದು: ನಿಜ ಒಪ್ಪಿಕೊಂಡ ಅಸ್ಟ್ರಾಜೆನೆಕಾ

0

ನವದೆಹಲಿ: ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮಗಳನ್ನು ಬೀರಬಹುದು ಎಂದು ಬ್ರಿಟಿಷ್‌ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ ಕೊನೆಗೂ ಒಪ್ಪಿಕೊಂಡಿದೆ.


ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ಜನರಿಗೆ ಈ ಲಸಿಕೆ ನೀಡಲಾಗಿತ್ತು. ಇದೀಗ ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ, ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್ ಕಡಿಮೆಗೆ ಕಾರಣವಾಗುವ ಸ್ಥಿತಿಯನ್ನು ಉಂಟುಮಾಡಬಹುದು ಎಂದು ಲಸಿಕೆ ತಯಾರಕರು ನ್ಯಾಯಾಲಯಕ್ಕೆ ನೀಡಿದ ದಾಖಲೆಗಳಲ್ಲಿ ಉಲ್ಲೇಖಿಸಿದ್ದಾರೆ.

ಲಸಿಕೆಯಿಂದಾಗುವ ಅಡ್ಡಪರಿಣಾಮದ ಬಗ್ಗೆ ದೂರು ದಾಖಲಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ವೇಳೆ ಅಸ್ಟ್ರಾಜೆನೆಕಾ ತನ್ನ ಲಸಿಕೆಯಿಂದ ಅಡ್ಡಪರಿಣಾಮ ಉಂಟಾಗುವ ಬಗ್ಗೆ ಒಪ್ಪಿಕೊಂಡಿದೆ. ಆದರೆ ಲಸಿಕೆ ಪಡೆಯದವರಲ್ಲೂ ಟಿಟಿಎಸ್ ಕಾಣಿಸಿಕೊಳ್ಳಬಹುದು. ಆದ್ದರಿಂದ ಈ ಬಗ್ಗೆ ಸಮಗ್ರ ಅಧ್ಯಯನದ ಅಗತ್ಯವಿದೆ ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here