Home ಕರಾವಳಿ ಇವತ್ತಿನಿಂದಲೇ 8 ಜಿಲ್ಲೆಗಳಲ್ಲಿ ಮಳೆ..! ಹವಾಮಾನ ಇಲಾಖೆ

ಇವತ್ತಿನಿಂದಲೇ 8 ಜಿಲ್ಲೆಗಳಲ್ಲಿ ಮಳೆ..! ಹವಾಮಾನ ಇಲಾಖೆ

0

ಬಿಸಿಲಿನ ತಾಪಕ್ಕೆ ರಾಜ್ಯದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಮಳೆರಾಯನಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಯಾವಾಗ ಮಳೆ ಬರುತ್ತದೆ ಎಂದು ಜನ ಕಾಯುತ್ತಿದ್ದಾರೆ.

ಮೇ 1 ರಿಂದ ಮೇ 7ವರೆಗೆ: ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಘಾಟ್‌ಗಳು, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ ಮತ್ತು ಚಾಮರಾಜನಗರದಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮೇ 7 ರಿಂದ 15ರವರೆಗೆ: ಮೈಸೂರು, ಹಾವೇರಿ, ಮೈಸೂರು, ಬೆಂಗಳೂರು, ರಾಮನಗರ, ಮಂಡ್ಯ, ಚಾಮರಾಜಮಗರ, ತುಮಕೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ, ಉಡುಪಿ ಘಾಟ್​ಗಳಲ್ಲಿ ಭರ್ಜರಿ ಮಳೆಯಾಗಲಿದೆ.

ಬೆಳಗಾವಿ, ಧಾರವಾಡ, ದಾವಣಗೆರೆ, ಹಾವೇರಿ ಮತ್ತು ಗದಗದಲ್ಲೂ ಅಲ್ಲಲ್ಲಿ ಮಳೆ ಬೀಳಲಿದೆ. ಜೊತೆಗೆ ಕಳೆದ ತಿಂಗಳುಗಿಂತ ಈ ಬಾರಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

LEAVE A REPLY

Please enter your comment!
Please enter your name here