Home ತಾಜಾ ಸುದ್ದಿ ಮಳೆಗಾಗಿ ಕಪ್ಪೆಗಳಿಗೆ ಮದುವೆ

ಮಳೆಗಾಗಿ ಕಪ್ಪೆಗಳಿಗೆ ಮದುವೆ

0

ಮಳೆ ಆಗದೆ ನೀರಿಗಾಗಿ ಎಲ್ಲಿಲ್ಲದ ಸಂಕಷ್ಟ ಎದುರಾಗುತ್ತಿದ್ದು, ಜನರು ಮಳೆಗಾಗಿ ದೇವರಲ್ಲಿ ಮೊರೆ ಹೋಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಒಂದೊಂದು ಕಡೆ ಒಂದೊಂದು ಸಂಪ್ರದಾಯಗಳೂ ಚಾಲ್ತಿಯಲ್ಲಿವೆ. ಈಗ ಮೈಸೂರಿನ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಪ್ಪೆಗಳಿಗೆ ಮದುವೆ ಮಾಡಿದ್ದಾರೆ. ಮಳೆ ಬಾರದಿರುವ ಸಂಕಟದ (Karnataka Weather Forecast) ಮಧ್ಯೆ ಮಳೆ ಬರಲಿ (Rain News), ವರುಣ ದೇವ ಸಂತುಷ್ಟಗೊಳ್ಳಲಿ, ದಿನವೂ ಮೈ ತೊಪ್ಪೆಯಾಗುವಷ್ಟು ಮಳೆ ಸುರಿಯಲಿ, ಕೃಷಿ ಚಟುವಟಿಕೆಗೆ ತೊಂದರೆಯಾಗದಿರಲಿ, ಭೂತಾಯಿಗೆ ಬೇಕಾಗುವಷ್ಟು ಮಳೆ ಸುರಿಯಲಿ, ಅಂತರ್ಜಲ ಪೂರ್ಣಗೊಳ್ಳಲಿ, ನದಿ, ಹಳ್ಳಕೊಳ್ಳಗಳು ತುಂಬಿಕೊಳ್ಳಲಿ ಎಂದು ಪ್ರಾರ್ಥನೆ ಮಾಡಿದ್ದಾರೆ.

ಬಿಸಿಲಿನ ಬೇಗೆಗೆ ತತ್ತರಿಸಿದ ಜನರು ಮಳೆ ಸುರಿಯುವಂತೆ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದರು. ಗ್ರಾಮದ ಬೀದಿ ಬೀದಿಗಳಲ್ಲಿ ಕಪ್ಪೆಗಳ ಮೆರವಣಿಗೆ ಮಾಡಿ ತಮಟೆ ಬಾರಿಸಿದ್ದಾರೆ. ಹುಯ್ಯೋ ಹುಯ್ಯೋ ಮಳೆರಾಯ ಬಾಳೆ ತೋಟಕ್ಕೆ ನೀರಿಲ್ಲ ಎಂದು ಘೋಷಣೆ ಕೂಗಿದರು.

LEAVE A REPLY

Please enter your comment!
Please enter your name here