ಕಾರ್ಕಳ: ಭಾರೀ ವಿವಾದಕ್ಕೆ ಕಾರಣವಾಗಿ ಇದೀಗ ಕೋರ್ಟ್ ಮೆಟ್ಟಿಲೇರಿರುವ ವಿವಾದಿಕ ಪರಶುರಾಮ ಥೀಂ ಪಾರ್ಕ್‌ನ ಇರುವ ಬೈಲೂರು ಸಮೀಪದ ಉಮಿಕ್ಕಳ ಗುಡ್ಡದಲ್ಲಿ ನಿನ್ನೆ ಬೆಂಕಿ ಅವಘಡ ಸಂಭವಿಸಿದೆ.
ಗುಡ್ಡದ ತಳದಲ್ಲಿ ಅಪರಾಹ್ನ 3ರ ವೇಳೆಗೆ ಕಾಣಿಸಿಕೊಂಡ ಬೆಂಕಿ ಗಿಡ ಮರ ಬಳ್ಳಿಗೆ ಹತ್ತಿಕೊಂಡು ಗಾಳಿಗೆ ತೀವ್ರಗತಿಯಲ್ಲಿ ವ್ಯಾಪಿಸಿತ್ತು. ಸ್ಥಳೀಯರ ಮಾಹಿತಿಯಂತೆ ಅಗ್ನಿಶಾಮಕ ದಳದವರು ಧಾವಿಸಿ ಬಂದು ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾದರು. ಆದರೆ ಬೆಡ್ಡ ಗುಡ್ಡ ಪ್ರದೇಶವಾದ ಕಾರಣ ಬೆಂಕಿ ನಂದಿಸಲು ಕಷ್ಟವಾಗಿತ್ತು. ಬಳಿಕ ಅಗ್ನಿಶಾಮಕ ದಳದ ಸಿಬಂದಿ, ಸ್ಥಳೀಯರು ನೀರನ್ನು ಹೊತ್ತೊಯ್ದು ನಂದಿಸುವ ಕಾರ್ಯಾಚರಣೆ ನಡೆಸಿದರು. ಅರಣ್ಯ ಇಲಾಖೆಯ ನೆರವನ್ನು ಪಡೆದುಕೊಳ್ಳಲಾಯಿತು. ಸುಮಾರು 30 ಎಕರೆ ಪ್ರದೇಶ ಬೆಂಕಿಗೆ ಆಹುತಿಯಾಗಿದ್ದು ಸಂಜೆ 6ರ ವೇಳೆಗೆ ನಿಯಂತ್ರಣಕ್ಕೆ ಬಂತು.
ಈ ನಡುವೆ ಇದ್ದಕ್ಕಿದ್ದ ಹಾಗೆ ಬೆಂಕಿ ಅವಘಡ ಸಂಬಂಸಿದ್ದು, ಚರ್ಚೆಗೆ ಕಾರಣವಾಗಿದೆ. ಈಗಾಗಲೇ ಹೈಕೋರ್ಟ್ ಇನ್ನು 4 ತಿಂಗಳಲ್ಲಿ ಪರುಶುರಾಮ ಥೀಂ ಪಾರ್ಕ್ ನ ಕಾಮಾಗಾರಿ ಮುಗಿಸಿ ಎಂದು ಗಡವು ನೀಡಿದ್ದು, ಈ ನಡುವೆ ಬೆಂಕಿ ಬಿದ್ದಿರುವುದು ಸಾಕಷ್ಟು ಚರ್ಚೆಗಳಿಗೆ ಎಡೆಮಾಡಿ ಕೊಟ್ಟಿತು.