Home ತಾಜಾ ಸುದ್ದಿ ಕೇರಳದಲ್ಲಿ ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ!

ಕೇರಳದಲ್ಲಿ ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ!

0

ಕೋಯಿಕ್ಕೋಡ್: ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.


ಕೇರಳ ರಾಜ್ಯದ ತ್ರಿಶೂರ್, ಮಲಪ್ಪುರಂ ಮತ್ತು ಕೋಝಿಕ್ಕೋಡ್ ಜಿಲ್ಲೆಗಳಲ್ಲಿ ವೆಸ್ಟ್ ನೈಲ್ ಜ್ವರ ಪ್ರಕರಣಗಳು ವರದಿಯಾಗಿವೆ. ಅವರ ಆರೋಗ್ಯ ಸ್ಥಿತಿ ಸಹಜವಾಗಿದ್ದು, ಮನೆಗಳಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿಗಳು ವಾಸವಿರುವ ಮನೆಗಳ ಸುತ್ತ ಬೇರೆ ಯಾರಲ್ಲೂ ಜ್ವರ ಕಂಡುಬಂದಿಲ್ಲ ಎಂದು ಜಿಲ್ಲಾ ಕಣ್ಗಾವಲು ತಂಡದ ಅಧಿಕಾರಿ ಹೇಳಿದ್ದಾರೆ. ಒಬ್ಬ ವ್ಯಕ್ತಿಯಲ್ಲಿ ಮಾತ್ರ ಸೋಂಕು ಕಂಡುಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕ್ಯುಲೆಕ್ಸ್ ಜಾತಿಯ ಸೊಳ್ಳೆಗಳಿಂದ ಹರಡುವ ವೈರಲ್ ಜ್ವರ ಇದಾಗಿದ್ದು, ಸೊಳ್ಳೆಗಳ ಸಂತಾನೋತ್ಪತ್ತಿ ಸ್ಥಳಗಳನ್ನು ನಾಶಪಡಿಸುವ ಮೂಲಕ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳುವಂತೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಆದೇಶಿಸಿದ್ದಾರೆ. ಈಗಾಗಲೇ ರೋಗದ ಲಕ್ಷಣ ಕಂಡುಬಂದಿದ್ದವರ ಪ್ರಯೋಗಾಲಯ ಮಾದರಿಯನ್ನು ಪುಣೆಯ ರಾಷ್ಟ್ರೀಯ ವೈರಾಣು ಕೇಂದ್ರಕ್ಕೆ ಕಳುಹಿಸಲಾಗಿತ್ತು. ಈಗ ಅದರ ವರದಿ ಬಂದಿದ್ದು, ಐವರು ವೆಸ್ಟ್ ನೈಲ್ ಫೀವರ್‌ನಿಂದ ಬಳಲುತ್ತಿರುವುದು ಗೊತ್ತಾಗಿದೆ. ಈ ಜ್ವರ ಸೊಳ್ಳೆಗಳಿಂದ ಹರಡುತ್ತದೆ ಎಂದು ಅವರು ಹೇಳಿದ್ದಾರೆ. 1937ರಲ್ಲಿ ಮೊದಲ ಬಾರಿಗೆ ಉಗಾಂಡಾದಲ್ಲಿ ಈ ಜ್ವರ ಪತ್ತೆಯಾಗಿತ್ತು. 2011ರಲ್ಲಿ ಕೇರಳದಲ್ಲಿ ಮೊದಲ ಬಾರಿಗೆ ಪತ್ತೆಯಾಗಿತ್ತು. 2019ರಲ್ಲಿ ಮಲ್ಲಪ್ಪುರಂನಲ್ಲಿ ಒಬ್ಬ ಬಾಲಕ ಜ್ವರದಿಂದ ಮೃತಪಟ್ಟಿದ್ದ. ಮೇ 2022ರಲ್ಲಿ ತ್ರಿಶೂರ್‌ನಲ್ಲಿ 47 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದರು.

LEAVE A REPLY

Please enter your comment!
Please enter your name here