ಕಾರ್ಕಳ ಪುರಸಭೆಯ ಎಲ್ಲಾ ವಾರ್ಡಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು ಇದರಿಂದಾಗಿ ಸಾರ್ವಜನಿಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕೆಲವು ವಾರ್ಡಗಳಲ್ಲಿ ದಿನ ಬಳಕೆ ಹಾಗೂ ಕುಡಿಯುವ ನೀರಿಗೂ ಕೊರತೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಬೇರೆ ಯಾವುದೋ ಜಿಲ್ಲೆಯ ಕಾಮಗಾರಿಯನ್ನು ವಹಿಸಿಕೊಂಡ ಗುತ್ತಿಗೆದಾರ ರಾಮಸಮುದ್ರಕ್ಕೆ ಅಕ್ರಮವಾಗಿ ಪಂಪ್ ಅಳವಡಿಸಿ ತನ್ನ ಕಾಮಗಾರಿಗಳಿಗೆ ಯಥೇಚ್ಛವಾಗಿ ನೀರು ಬಳಸುತ್ತಿದ್ದು ಅದನ್ನು ತಕ್ಷಣ ನಿಲ್ಲಿಸುವಂತೆ ಮತ್ತು ಈ ಬಗ್ಗೆ ಕ್ರಮ ಜರುಗಿಸುವಂತೆ ಜಿಲ್ಲಾದಿಕಾರಿಯವರನ್ನು ಪುರಸಭಾ ಸದಸ್ಯ ಶುಭದರಾವ್ ಆಗ್ರಹಿಸಿದ್ದಾರೆ.
ಈ ಅಕ್ರಮ ಕಾಮಗಾರಿಯ ಬಗ್ಗೆ ಜಲಮಂಡಲಿಯ ಅಧಿಕಾರಿಗಳು, ಹಾಗೂ ಪುರಸಭೆಯ ಮುಖ್ಯಾಧಿಕಾರಿಗಳಲ್ಲಿ ಸಾರ್ವಜನಿಕರು ಎಷ್ಟೇ ದೂರು ಸಲ್ಲಿಸಿದರೂ ಅವರ ನಿರ್ಲಕ್ಷ್ಯ ಮತ್ತು ಮೌನ ಅನೇಕ ಸಂಶಯಗಳಿಗೆ ಅವಕಾಶ ಮಾಡಿಕೊಟ್ಟಿದೆ. ಪುರಸಭಾ ವ್ಯಾಪ್ತಿಯ ನೀರಿನ ಸಮಸ್ಯೆಯ ಗಂಬೀರತೆಯ ಬಗ್ಗೆ ಸಂಪುರ್ಣ ಮಾಹಿತಿ ಇದ್ದರೂ ಅಕ್ರಮ ಕಾಮಗಾರಿ ನಡೆಸಲು ಅವಕಾಶ ಮಾಡಿಕೊಟ್ಟ ಅಧಿಕಾರಿಗಳ ವಿರುದ್ಧವೂ ಕಠಿಣ ಕ್ರಮ ಜರುಗಿಸಬೇಕಾಗಿ ಮನವಿಯಲ್ಲಿ ಆಗ್ರಹಿಸಿದ್ದಾರೆ.