Home ಕರಾವಳಿ ಮಂಗಳೂರು: ಕೈತಪ್ಪಿದ ನೈರುತ್ಯ ಶಿಕ್ಷಕರ ಕ್ಷೇತ್ರದ ಟಿಕೆಟ್ – ಬಂಡಾಯ ಅಭ್ಯರ್ಥಿಯಾಗಿ ಡಾ‌.ಎಸ್.ಆರ್.ಹರೀಶ್ ಆಚಾರ್ಯ ಕಣಕ್ಕೆ

ಮಂಗಳೂರು: ಕೈತಪ್ಪಿದ ನೈರುತ್ಯ ಶಿಕ್ಷಕರ ಕ್ಷೇತ್ರದ ಟಿಕೆಟ್ – ಬಂಡಾಯ ಅಭ್ಯರ್ಥಿಯಾಗಿ ಡಾ‌.ಎಸ್.ಆರ್.ಹರೀಶ್ ಆಚಾರ್ಯ ಕಣಕ್ಕೆ

0

ಮಂಗಳೂರು: ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಡಾ‌.ಎಸ್.ಆರ್.ಹರೀಶ್ ಆಚಾರ್ಯ ಅವರು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ‌. ಡಾ.ಎಸ್.ಆರ್.ಹರೀಶ್ ಆಚಾರ್ಯ ಅವರು ನೈರುತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇವರೇ ಬಿಜೆಪಿ ಅಭ್ಯರ್ಥಿ ಎಂದು ಅಂತಿಮವಾಗುವ ಹಂತದಲ್ಲಿತ್ತು‌. ಆದರೆ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಲಿ ಎಂಎಲ್ ಸಿ ಎಲ್.ಭೋಜೇಗೌಡರಿಗೆ ಬಿಜೆಪಿ ಮಣೆ ಹಾಕಿದ ಹಿನ್ನೆಲೆಯಲ್ಲಿ ಕೊನೆಯ ಕ್ಷಣದಲ್ಲಿ ಡಾ.ಎಸ್.ಆರ್.ಹರೀಶ್ ಆಚಾರ್ಯರ ಟಿಕೆಟ್ ಕೈತಪ್ಪಿತ್ತು‌. ಆದ್ದರಿಂದ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ‌. ಈ ಬಗ್ಗೆ ನಗರದ ಖಾಸಗಿ ಹೊಟೇಲ್ ನಲ್ಲಿ ಡಾ.ಎಸ್.ಆರ್.ಹರೀಶ್ ಆಚಾರ್ಯ ಮಾತನಾಡಿ, ತಾನು ಯಾವುದೇ ಪಕ್ಷದ ವಿರುದ್ಧ ಬಂಡಾಯ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿಲ್ಲ. ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷ ರಾಜಕಾರಣಕ್ಕೆ ಅವಕಾಶವಿಲ್ಲ. ಈ ಚುನಾವಣೆ ಪಕ್ಷ ಚುನಾವಣೆಗಿಂತ ಬೇರೆಯಾಗಿದೆ. ನಾನು ಕರಾವಳಿ ಜಿಲ್ಲೆಗಳ ಶಿಕ್ಷಕರ ಬೆಂಬಲದೊಂದಿಗೆ ಸ್ಪರ್ಧಿಸುತ್ತಿದ್ದೇನೆ‌. ಆದರೆ ಮುಂದಕ್ಕೆ ನನಗೆ ಯಾವ ಪಕ್ಷ ನನಗೆ ಬೆಂಬಲ ನೀಡುವ ಸಂಭವವಿದೆ. ನೈರುತ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಗಳನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಕರಾವಳಿ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು, ಪದವೀಧರರು ಇದ್ದರೂ, ಈ ಭಾಗದ ಅಭ್ಯರ್ಥಿಗಳ ಪರಿಗಣಿಸದಿರುವುದು ನೇರವಾಗಿ ಕರಾವಳಿ ಜಿಲ್ಲೆಗಳ ಶಿಕ್ಷಕರು, ಪದವೀಧರರ ಅಸ್ತಿತ್ವವನ್ನೇ ನಿರಾಕರಿಸಿದಂತಾಗಿದೆ. ಮೈತ್ರಿ ಇನ್ನಿತರ ಕಾರಣಗಳನ್ನು ಮುಂದಿಟ್ಟು ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ತೊಡಕು ಉಂಟು ಮಾಡಬಾರದು ಎಂದು ಡಾ.ಎಸ್.ಆರ್. ಹರೀಶ್ ಆಚಾರ್ಯ ಹೇಳಿದರು.


LEAVE A REPLY

Please enter your comment!
Please enter your name here