ಚಿತ್ರದುರ್ಗದ ಹೊರವಲಯದಲ್ಲಿ ಕಳೆದ ವರ್ಷ ಡಿಸೆಂಬರ್ ನಲ್ಲಿ ಒಂದೇ ಮನೆಯಲ್ಲಿ ಐವರ ಅಸ್ಥಿಪಂಜರಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾವನ್ನಪ್ಪಿರುವವರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಜ್ಞರು ತಿಳಿಸಿದ್ದಾರೆಂದು ಜಿಲ್ಲಾ ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ.
ಒಂದೇ ಕುಟುಂಬದ ಐವರ ಮೃತದೇಹಸ್ತಿ ಪಂಜರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಬಂಧಿ ಪವನ್ ಕುಮಾರ್ ಎಂಬುವರು ಬಡಾವಣೆ ಪೊಲೀಸ್ ಠಾಣೆಯಲ್ಲಿ ಸಾವಿನ ಬಗ್ಗೆ ದೂರು ದಾಖಲಿಸಿದ್ದರು. ಈ ಸಾವುಗಳಿಗೆ ಸಂಬಂಧ ಇಲ್ಲ ಎಂದು ತಿಳಿಯಿತು.ಇನ್ನೂ ಕೆಲವೊಂದು ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ, ಹಾಗಾಗಿ ಈ ತನಿಖೆ ಮುಂದುವರೆಯುತ್ತದೆ. ಹೇಗೆ ಐವರು ಮೃತಪಟ್ಟಿದ್ದಾರೆ ಎಂಬುದು FSLನಲ್ಲಿ ಧೃಡ ಆಗಿದೆ ಎಂದು ಚಿತ್ರದುರ್ಗ ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ ಮಾಹಿತಿ ನೀಡಿದರು.