Home ಕರಾವಳಿ ಉಳ್ಳಾಲ : ಎರಡು ಸ್ಕೂಟರ್‌ಗಳ ಮಧ್ಯೆ ಅಪಘಾತ – ಸಹ ಸವಾರ ಸಾವು..!

ಉಳ್ಳಾಲ : ಎರಡು ಸ್ಕೂಟರ್‌ಗಳ ಮಧ್ಯೆ ಅಪಘಾತ – ಸಹ ಸವಾರ ಸಾವು..!

0

ಉಳ್ಳಾಲ : ಎರಡು ಸ್ಕೂಟರ್‌ಗಳ ಮಧ್ಯೆ ನಡೆದ ಅಪಘಾತದಲ್ಲಿ ಸಹ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ನಗರದ ಹೊರವಲಯದ ಕಲ್ಲಾಪು ಜಂಕ್ಷನ್ ನಲ್ಲಿ ನಡೆದಿದೆ. ಉಳ್ಳಾಲ ಕೋಟೆಪುರ, ಕೋಡಿ ನಿವಾಸಿ ಅಹಮ್ಮದ್ ನಿಷಾದ್ (22) ಮೃತಪಟ್ಟ ಯುವಕ. ನಿಷಾದ್ ಮುಂಜಾನೆ 4ಗಂಟೆಯ ವೇಳೆಗೆ ಸಯ್ಯದ್ ಹಫೀಜ್ ಎಬುವರೊಂದಿಗೆ ಸ್ಕೂಟರ್ ನಲ್ಲಿ ಸಹ ಸವಾರನಾಗಿ ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದರು. ಈ ವೇಳೆ ಕಲ್ಲಾಪು ಜಂಕ್ಷನ್ ನಲ್ಲಿ ತೊಕ್ಕೊಟ್ಟಿನಿಂದ ಬಂದು ಗ್ಲೋಬಲ್ ಮಾರ್ಕೆಟ್ ಗೆ ಕ್ರಾಸ್ ಆಗುತ್ತಿದ್ದ ಸ್ಕೂಟ‌ರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ಸ್ಕೂಟರ್ ಸವಾರರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಂಭೀರ ಗಾಯಗೊಂಡ ನಿಷಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸ್ಕೂಟರ್ ಸವಾರ ಹಫೀಜ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮತ್ತೋರ್ವ ಸ್ಕೂಟರ್ ಸವಾರ ಕುತ್ತಾರು ಪದವು ನಿವಾಸಿ ಅಬೂಬಕ್ಕರ್ ಸಿದ್ದೀಕ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here