Home ತಾಜಾ ಸುದ್ದಿ ಅಂಜಲಿ ಹತ್ಯೆ ಪ್ರಕರಣ – ಮನನೊಂದು ಸಹೋದರಿ ಆತ್ಮಹತ್ಯೆಗೆ ಯತ್ನ

ಅಂಜಲಿ ಹತ್ಯೆ ಪ್ರಕರಣ – ಮನನೊಂದು ಸಹೋದರಿ ಆತ್ಮಹತ್ಯೆಗೆ ಯತ್ನ

0

ಹುಬ್ಬಳ್ಳಿ:ನಗರದ ವೀರಾಪುರ ಓಣಿಯಲ್ಲಿ ಇತ್ತೀಚೆಗೆ ನಡೆದಿದ್ದ ಅಂಜಲಿ ಅಂಬಿಗೇರ ಹತ್ಯೆಯಿಂದ ಬೇಸತ್ತ ಆಕೆಯ ಸಹೋದರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಶನಿವಾರ (ಮೇ 18) ಅಂಜಲಿ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಂಜಲಿ ಸಹೋದರಿ ಯಶೋಧಾ ಅವರು, ಮನೆಗೆ ಮರಳಿದ ಬಳಿಕ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ. ಪ್ರತಿಭಟನೆ ವೇಳೆ ಸಹ ಯುವತಿ ತೀವ್ರ ಅಸ್ವಸ್ಥಗೊಂಡಿದ್ದು, ಪ್ರಜ್ಞೆ ತಪ್ಪಿದ್ದರು ಎಂದು ತಿಳಿದುಬಂದಿದೆ.

ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ (21) ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಆರೋಪಿ ಗಿರೀಶ್ ಅಲಿಯಾಸ್ ವಿಶ್ವ ಏಕಾಏಕಿ ಮನೆಗೆ ನುಗ್ಗಿದ್ದ. ಬಳಿಕ ಆಕೆಯ ಅಜ್ಜಿ ಮತ್ತು ಇಬ್ಬರು ಸಹೋದರಿಯರ ಮುಂದೆಯೇ ಅಂಜಲಿಯನ್ನ ಎಳೆದಾಡಿ ಚಾಕುವಿನಿಂದ ಚುಚ್ಚಿ ಭೀಕರವಾಗಿ ಹತ್ಯೆಗೈದಿದ್ದ.

 

LEAVE A REPLY

Please enter your comment!
Please enter your name here