Home ಕರಾವಳಿ ಬಂಟ್ವಾಳ: ಚಲಿಸುತ್ತಿದ್ದ ಕಾರಿನ ಮೇಲೆ ಮರಬಿದ್ದು ಇಬ್ಬರಿಗೆ ಗಾಯ..!

ಬಂಟ್ವಾಳ: ಚಲಿಸುತ್ತಿದ್ದ ಕಾರಿನ ಮೇಲೆ ಮರಬಿದ್ದು ಇಬ್ಬರಿಗೆ ಗಾಯ..!

0

ಬಂಟ್ವಾಳ: ಬಾರಿ ಗಾಳಿ ಮಳೆಗೆ ರಸ್ತೆ ಬದಿಯಲ್ಲಿದ್ದ ದೊಡ್ಡ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಇಬ್ಬರು ಗಾಯಗೊಂಡ ಘಟನೆ ಮಾಣಿ ಮೈಸೂರು ರಸ್ತೆಯ ಮಿತ್ತೂರು ಸಮೀಪದ ಕುಕ್ಕರಬೆಟ್ಟು ಎಂಬಲ್ಲಿ ಇದೀಗ ನಡೆದಿದೆ.

ಮಂಗಳೂರು ಹಂಪನಕಟ್ಟೆ ‌ನಿವಾಸಿಗಳು ಎಂದು ಹೇಳಲಾಗಿದ್ದು, ಇವರ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.ಕಾರಿನಲ್ಲಿ ಒಟ್ಟು ನಾಲ್ಕು ಜನಪ್ರಯಾಣಿಕರಿದ್ದು, ಮೈಸೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ.ಚಲಿಸುತ್ತಿದ್ದಾಗಲೇ ಮರ ಮುರಿದು ಬಿದ್ದ ಕಾರಣ ಕಾರು ಜಖಂಗೊಂಡಿದೆ. ಘಟನೆಯಿಂದ ಕೆಲಹೊತ್ತು ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ.ಮರ ವಿದ್ಯುತ್ ಕಂಬದ ಮೇಲೆ ಬಿದ್ದು ಕಂಬ ಮುರಿದು ಬಿದ್ದಿದೆ,ಹಾಗೂ ವಿದ್ಯುತ್ ತಂತಿಗಳು ಕಡಿದು ನಷ್ಟವುಂಟಾಗಿದೆ.ಸ್ಥಳೀಯರು ಕೂಡಲೇ ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ, ಮತ್ತು ಸಂಚಾರಕ್ಕೆ ಅಡಚಣೆಯಾಗಿದ್ದ ಮರವನ್ನು ತೆರವುಮಾಡಿದ್ದಾರೆ.

LEAVE A REPLY

Please enter your comment!
Please enter your name here