ಮಂಗಳೂರು : ಇತ್ತೀಚೆಗೆ ಕಂಕನಾಡಿ ಮಸೀದಿ ಸಮೀಪ ಯುವಕರ ಗುಂಪೊಂದು ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಇದೀಗ ಇದು ಹಿಂದೂ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣಾಗಿದೆ. ಈ ನಡುವೆ ರಸ್ತೆಗಳಲ್ಲಿ ನಮಾಜ್ ನಿಲ್ಲಿಸದಿದ್ದರೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣದ ಮೂಲಕ ತಡೆಯುತ್ತೇವೆ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.



ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಶರಣ್ ಪಂಪ್ ವೆಲ್ ಕೆಲವು ಕಡೆ ರಸ್ತೆ ಮತ್ತು ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡುತ್ತಿರುವ ಘಟನೆಗಳು ನಡೆಯುತ್ತಿರುವುದು ಜಿಲ್ಲೆಯಲ್ಲಿ ಅಶಾಂತಿ ನಿರ್ಮಿಸಲು ಸಂಚು ರೂಪಿಸುತ್ತಿದ್ದಾರೆ. ತಕ್ಷಣ ಜಿಲ್ಲಾಡಳಿತ ಇವರ ವಿರುದ್ದ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸಿದರೆ ಅದೇ ಸ್ಥಳದಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದರ ಮೂಲಕ ತಡೆಯುತ್ತೇವೆ ಎಂಬ ಎಚ್ಚರಿಕೆ ಕೊಡುತ್ತೇವೆ.

