ರಾಜ್ಯದಲ್ಲಿ ಲವ್ ಜಿಹಾದ್ ತಡೆಗೆ ಶ್ರೀರಾಮಸೇನೆ ರಾಜ್ಯದ ಹಲವು ಕಡೆ ಸಹಾಯವಾಣಿ ಆರಂಭಿಸಿದ್ದು, ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಪ್ರಮೋದ್ ಮುತಾಲಿಕ್ ಚಾಲನೆ ನೀಡಿದ್ದಾರೆ.
ರಾಜ್ಯದ ಮಂಗಳೂರು, ಬೆಂಗಳೂರು, ಹುಬ್ಬಳ್ಳಿ, ಬಾಗಲಕೋಟೆ, ಕಲಬುರಗಿ ಹಾಗೂ ದಾವಣಗೆರೆಯಲ್ಲಿ ಸಹಾಯವಾಣಿ ಆರಂಭ ಮಾಡಲು ನಿರ್ಧರಿಸಿದೆ.
ಜೊತೆಗೆ ಸಹಾಯವಾಣಿಗೆ ಕರೆ ಮಾಡಿದವರ ಹೆಸರು ಕೂಡ ಗೌಪ್ಯವಾಗಿರಿಸಲು ಸಂಘಟನೆ ತೀರ್ಮಾನ ಮಾಡಿದೆ.
ಲವ್ ಜಿಹಾದ್ ಜಾಲದಲ್ಲಿ ಸಿಕ್ಕಿ ಬೀಳುವ ಯುವತಿಯರನ್ನು ಈ ಜಾಲದಿಂದ ಹೊರತರಲು ಈ ಹೊಸ ಪ್ರಯತ್ನ ಮಾಡಲಾಗಿದೆ. ಯಾರು ಈ ಸಹಾಯ ಪಡೆಯಲು ಕರೆ ಮಾಡುತ್ತಾರೋ ಅಂತಹವರಿಗೆ ಆಯಾ ಜಿಲ್ಲೆಗಳಲ್ಲಿಯೇ ವಕೀಲರು, ಕೌನ್ಸೆಲಿಂಗ್ ತಜ್ಞರು ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಗಳಿರುವ ತಂಡ ಕಾರ್ಯ ನಿರ್ವಹಣೆ ಮಾಡುತ್ತದೆ. ಕಾನೂನು ಬದ್ದವಾಗಿ, ಸುವ್ಯವಸ್ಥಿತವಾಗಿ ಮಾಡಲು ಈ ಯೋಜನೆ ರೂಪಿಸಲಾಗಿದೆ. ನೆರವಿನ ಅಗತ್ಯವಿದ್ದವರೂ 90904434444 ಸಂಖ್ಯೆಗೆ ಕರೆ ಮಾಡುವಂತೆ ಸೂಚನೆ ನೀಡಲಾಗಿದೆ.