Home ಕರಾವಳಿ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ: ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ಹಿರಿಯ ನ್ಯಾಯವಾದಿ ಮಹೇಶ್...

ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ: ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ಹಿರಿಯ ನ್ಯಾಯವಾದಿ ಮಹೇಶ್ ಕಜೆ ನೇಮಕ

0

ಪುತ್ತೂರು ಹುಲಿವೇಷದ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿಗಳ ಜಾಮೀನು ನಿರಾಕರಣೆ ಬೆನ್ನಲ್ಲೇ ನೇರ ನಡೆಯ ನ್ಯಾಯವಾದಿ ಮಹೇಶ್ ಕಜೆ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ರಾಜ್ಯ ಸರಕಾರ ನೇಮಕ‌ ಮಾಡಿ ಅದೇಶ ಮಾಡಿದೆ. ಮಹೇಶ್ ಕಜೆ ಪ್ರಸ್ತುತ ಜಾರಿ ನಿರ್ದೇಶನಾಲಯ ( ಇಡಿ ) ಇದರ ಕೇಂದ್ರ ಸರಕಾರದ ಸರಕಾರಿ ಅಭಿಯೋಜಕರು ಹಾಗೂ ಹಿರಿಯ ನ್ಯಾಯಾಲಯಗಳೂ ಹೌದು. ಇವರನ್ನು ನೇಮಕ ಮಾಡಿರುವುದು ಈಗಾಗಲೇ ಈ ಪ್ರಕರಣವನ್ನು ಸಮರ್ಥವಾಗಿ ನಿರ್ವಹಣೆ ಮಾಡಿ ಜಾಮೀನು ನಿರಾಕರಣಯಾಗುವಂತೆ ಮಾಡಿದ ಸರಕಾರಿ ಅಭಿಯೋಜಕರಾದ ಜಯಂತಿಯವರಿಗೆ ಆನೆಭಲ ಬಂದಂತಾಗಿದ್ದು, ಆರೋಪಿಗಳ ಎದೆಯಲ್ಲಿ ನಡುಕ ಹುಟ್ಟುವಂತೆ ಮಾಡಿದೆ.

LEAVE A REPLY

Please enter your comment!
Please enter your name here