Home ತಾಜಾ ಸುದ್ದಿ ಚಿನ್ನದ ಬೆಲೆ ಭಾರಿ ಏರಿಕೆ, ಇಂದಿನ ಬೆಲೆ ಎಷ್ಟು?

ಚಿನ್ನದ ಬೆಲೆ ಭಾರಿ ಏರಿಕೆ, ಇಂದಿನ ಬೆಲೆ ಎಷ್ಟು?

0

ಚಿನ್ನದ ಬೆಲೆ ಭಾರಿ ಏರಿಕೆ ಕಾಣುತ್ತಿದೆ, ಊಹೆಗೂ ಮೀರಿ ಚಿನ್ನದ ಬೆಲೆ ಮೇಲಕ್ಕೆ ಏರುತ್ತಿದೆ. ಇಷ್ಟುದಿನ ಕೈಗೆ ಸಿಗುವಂತೆ ಇದ್ದ ಚಿನ್ನದ ಬೆಲೆ ಇದೀಗ ಭಾರಿ ಏರಿಕೆ ಕಾಣುತ್ತಿದೆ. ಹಾಗಾದ್ರೆ ಇಂದು ಎಷ್ಟು ಏರಿಕೆ ಆಗಿದೆ ಚಿನ್ನದ ಬೆಲೆ? ಚಿನ್ನದ ಬೆಲೆ ಏರಿಕೆಗೆ ಕಾರಣ ಏನು?

ಚಿನ್ನದ ಬೆಲೆ ಯಾವಾಗ ಕಡಿಮೆ ಆಗಬಹುದು? ಸಂಪೂರ್ಣ ಮಾಹಿತಿ ತಿಳಿಯಲು ಮುಂದೆ ಓದಿ.


ಕಳೆದ 15 ವರ್ಷಕ್ಕೆ ಹೋಲಿಕೆ ಮಾಡಿದ್ರೆ ಚಿನ್ನ ಬೆಲೆಯಲ್ಲಿ ಸಾಕಷ್ಟು ಬದಲಾವಣೆ ಆಗಿ, ದೊಡ್ಡ ಮಟ್ಟದಲ್ಲಿ ಚಿನ್ನ ಏರಿಕೆ ಕಂಡಿದೆ. ಹಾಗೆ ಮುಂದಿನ ದಿನಗಳಲ್ಲಿ ಚಿನ್ನಕ್ಕೆ ಇನ್ನು ಹೆಚ್ಚಿನ ಬೇಡಿಕೆ ಬರುವ ಸಾಧ್ಯತೆ ದಟ್ಟವಾಗಿದೆ. ಇದಕ್ಕೆಲ್ಲ ಕಾರಣ ಏನೆಂದರೆ ಭೂಮಿಯ ಒಳಗೆ ಸಿಗುತ್ತಿದ್ದ ಚಿನ್ನ ಭಾಗಶಃ ಕಡಿಮೆ ಆಗುತ್ತಾ ಬರುತ್ತಿದೆ. ಹೀಗಾಗಿ ಗಣಿಗಾರಿಕೆ ನಡೆಸುವ ಸಾಧ್ಯತೆ ಕೂಡ ಕ್ಷೀಣಿಸ್ತಿದೆ.

ಇದು ಕೂಡ ಚಿನ್ನದ ಮೇಲೆ ಸಾಕಷ್ಟು ದೊಡ್ಡ ಪ್ರಮಾಣದ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಚಿನ್ನದ ಬೆಲೆ ಈ ವರ್ಷದ ಅಂತ್ಯಕ್ಕೆ 1 ಲಕ್ಷ ರೂಪಾಯಿ ಆಸುಪಾಸಿಗೆ ಬಂದರೂ ಅಚ್ಚರಿ ಪಡಬೇಕಿಲ್ಲ ಎನ್ನುತ್ತಾರೆ ತಜ್ಞರು. ಹಾಗಾದ್ರೆ ಇದೀಗ ಎಷ್ಟಿದೆ ಚಿನ್ನದ ಬೆಲೆ? ಮುಂದೆ ಓದಿ.

ಚಿನ್ನ 7,600 ರೂಪಾಯಿ ಏರಿಕೆ!

ಶುದ್ಧ ಚಿನ್ನ ಎಂದು ಕರೆಯಲಾಗುವ 24 ಕ್ಯಾರೆಟ್ ಚಿನ್ನದ ಬೆಲೆ ಏರಿಕೆ ಆಗಿದ್ದು ಈಗ 24 ಕ್ಯಾರೆಟ್ ಚಿನ್ನದ ಬೆಲೆ 100 ಗ್ರಾಂಗೆ 7,600 ರೂಪಾಯಿ ಏರಿಕೆ ಕಂಡಿದೆ. ಈ ಮೂಲಕ, ಶುದ್ಧ ಚಿನ್ನ ಬೆಲೆ ಪ್ರತಿ 100 ಗ್ರಾಂಗೆ 7,28,700 ರೂಪಾಯಿ ಆಗಿದೆ. ಇದರ ಜೊತೆಗೆ ಶುದ್ಧ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 72,110 ರೂಪಾಯಿಗೆ ಏರಿಕೆ ಆಗಿದೆ.

ಆಭರಣ ಚಿನ್ನ ಅಂದ್ರೆ 22 ಕ್ಯಾರೆಟ್ ಚಿನ್ನದ ಬೆಲೆ ಮಾರುಕಟ್ಟೆಯಲ್ಲಿ ಭಾರಿ ಏರಿಕೆ ಕಂಡಿದೆ ಪ್ರತಿ 100 ಗ್ರಾಂ ಆಭರಣ ಚಿನ್ನದ ಬೆಲೆ ಈಗ 7,000 ರೂಪಾಯಿ ಏರಿಕೆ ಕಂಡಿದೆ. ಈ ಮೂಲಕ ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ಈಗ 700 ರೂ. ರಷ್ಟು ಏರಿಕೆಯಾಗಿದೆ. ಆಭರಣ ಚಿನ್ನದ ಬೆಲೆ ಏರಿಕೆ ನಂತರ ಇದೀಗ ಪ್ರತಿ 10 ಗ್ರಾಂಗೆ 66,800 ರೂಪಾಯಿಗೆ ಮಾರಾಟ ಆಗುತ್ತಿದೆ.

ಚಿನ್ನದ ಬೆಲೆ ಮುಗಿಲು ಮುಟ್ಟುತ್ತಿದೆ!

ಒಟ್ನಲ್ಲಿ ಚಿನ್ನದ ಬೆಲೆ ಭಾರಿ ಏರಿಕೆ ಕಾಣುತ್ತಿದ್ದು, ಲೋಕಸಭೆ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಹಳದಿ ಲೋಹ ಚಿನ್ನ ಭಾರಿ ಏರಿಕೆ ಕಂಡಿದೆ. ಹಾಗೇ, ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿ ಚಿನ್ನ ಭಾರಿ ಏರಿಕೆ ಕಾಣುವ ರೀತಿ ಇದೆ ಎನ್ನಲಾಗಿದೆ. ಆದರೆ ಮುಂದಿನ ತಿಂಗಳುಗಳಲ್ಲಿ ಚಿನ್ನದ ಬೆಲೆ ಇಳಿಕೆ ಕಾಣುವ ನಿರೀಕ್ಷೆ ಕೂಡ ಇದೆ.

LEAVE A REPLY

Please enter your comment!
Please enter your name here