ವದೆಹಲಿ: ಜೂನ್ 9 ರ ಭಾನುವಾರ ಸಂಜೆ 6 ಗಂಟೆಗೆ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಅವರು ಮಾಹಿತಿ ನೀಡಿದ್ದಾರೆ.



ಅವರು ನಡೆದ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟದಲ್ಲಿ ಹೊಸದಾಗಿ ಆಯ್ಕೆಯಾದ ಸಂಸದರು ಶುಕ್ರವಾರ ಬೆಳಗ್ಗೆ ಸಂಸತ್ತಿನಲ್ಲಿ ಸಭೆ ಸೇರಿ ಮುಂಬರುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಸಂಪುಟ ರಚನೆಯ ಸಿದ್ಧತೆಗಳ ಕುರಿತು ಚರ್ಚೆ ನಡೆಸಿದ ಬಳಿಕ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.


ಈ ನಡುವೆ ಬುಧವಾರ ಎನ್‌ಡಿಎ ಪಕ್ಷಗಳ ನಾಯಕರ ಸಣೆಯಲ್ಲಿ ನರೇಂದ್ರ ಮೋದಿ ಅವರನ್ನೇ ಮತ್ತೊಮ್ಮೆ ದೇಶದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.