Home ಸಿನೆಮಾ ಮಂಗಳೂರು:ತುಡರ್ ತುಳು ಸಿನಿಮಾ ಜೂನ್ 14 ರಂದು ತೆರೆಗೆ

ಮಂಗಳೂರು:ತುಡರ್ ತುಳು ಸಿನಿಮಾ ಜೂನ್ 14 ರಂದು ತೆರೆಗೆ

0

ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ ಜೂನ್ 14 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.

ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಬೆಳ್ತಂಗಡಿಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಸಿನಿಮಾ ತೆರೆಕಾಣಲಿದೆ.
ಈಗಾಗಲೇ ತುಡರ್ ಸಿನಿಮಾ ವಿದೇಶದಲ್ಲಿ ಪ್ರೀಮಿಯರ್ ಶೋ ಪ್ರದರ್ಶನಗೊಂಡು ಸಾರ್ವತ್ರಿಕ ಶ್ಲಾಘನೆಗೆ ಪಾತ್ರವಾಗಿದೆ. ಉತ್ತಮ ಚಿತ್ರಕತೆಯನ್ನೊಳಗೊಂಡ ಸಿನಿಮಾ ಕುಟುಂಬ ವರ್ಗದವರನ್ನು ಆಕರ್ಷಿಸಿದೆ. ನಾಯಕ ನಟ ಸಿದ್ದಾಥ್೯ ಶೆಟ್ಟಿ ಮೊದಲ ಪ್ರಯತ್ನದಲ್ಲೇ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ‌.

ಸಿನಿಮಾಕ್ಕೆ ವಿಲ್ಸನ್ ರೆಬೆಲ್ಲೊ ಬಂಡವಾಳ ಹೂಡಿದ್ದಾರೆ. ಸಿನಿಮಾಕ್ಕೆ ಸಹ ನಿರ್ಮಾಪಕರು : ಹರೀಶ್ ಶೆಟ್ಟಿ, ವಿದ್ಯಾ ಸಂಪತ್ ನಿರ್ದೇಶಕರು : ತೇಜೇಶ್ ಪೂಜಾರಿ ಎಲ್ಟನ್ ಮಸ್ಕರೇನಸ್, ಕಥೆ , ಚಿತ್ರ ಕಥೆ , ಸಂಭಾಷಣೆ ಸಾಹಿತ್ಯ: ಮೋಹನ್ ರಾಜ್. ಸಂಗೀತ : ಪ್ಯಾಟ್ಟ್ಸನ್ ಪಿರೇರಾ , ಸಾಯೀಶ್ ಭಾರದ್ವಾಜ್ ಛಾಯಾಗ್ರಹಣ: ಚಂತೂ ಮೆಪ್ಪಯುರು, ಪ್ರೊಡಕ್ಷನ್ ಮ್ಯಾನೇಜರ್ ಕಾರ್ತಿಕ್ ರೈ ಅಡ್ಯನಡ್ಕ, ನೃತ್ಯ ಸಂಯೋಜಕ ವಿಜೇತ್ R ನಾಯಕ್, ಸಂಕಲನ : ಗಣೇಶ್ ನೀರ್ಚಾಲ್ , ಪ್ರಚಾರ ವಿನ್ಯಾಸ : ದೇವಿ.

ತುಡರ್ ಸಿನಿಮಾಕ್ಕೆ ಮಂಗಳೂರು ಮತ್ತು ಉಡುಪಿಯ ಆಸುಪಾಸಿನಲ್ಲಿ ಸುಮಾರು 35 ದಿನಗಳ ಕಾಲ ಚಿತ್ರೀಕರಣ ನಡೆದಿದೆ.ತಾರಾಗಣದಲ್ಲಿ ಸಿದ್ಧಾರ್ಥ್ ಎಚ್ ಶೆಟ್ಟಿ, ದೀಕ್ಷಾ ಭಿಷೇ, ಅರವಿಂದ ಬೋಳಾರ್, ರೂಪ ವರ್ಕಾಡಿ, ಸದಾಶಿವ ಅಮೀನ್, ನಮಿತಾ ಕೂಳೂರು, ಎಲ್ಟನ್ ಮಶ್ಚರೇನ್ಹಸ್, ವಿಕಾಸ್ ಪುತ್ರನ್, ಪ್ರಜ್ವಲ್ ಶೆಟ್ಟಿ, ಹರ್ಷಿತಾ ಶೆಟ್ಟಿ, ರಾಧೇಶ್ ಶೆಣೈ ಅನ್ವಿತಾ ಸಾಗರ್, ಜಯಶೀಲ, ಉಮೇಶ್ ಮಿಜಾರ್, ಅಶೋಕ್ ಕುಮಾರ್ , ಉದಯ ಪೂಜಾರಿ, ಮೋಹನ್ ರಾಜ್ ಇದ್ದಾರೆ.

LEAVE A REPLY

Please enter your comment!
Please enter your name here