ಮಂಗಳೂರು : ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕಾಂಗ್ರೆಸ್ ಸ್ಥಾನ ಪಡೆಯುವಲ್ಲಿ ವಿಫಲವಾಗಿದೆ. ಹೀಗಾಗಿ ಕೆಲ ಕಾಂಗ್ರೆಸ್ ನಾಯಕರು ಇದೇ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದೇ ಸೂಕ್ತ ಎಂದು ಹೇಳುತ್ತಿದ್ದರೆ, ಇನ್ನೊಂದು ಕಡೆ ಮಂಗಳೂರಿನಲ್ಲಿ ಎಂ ಎಲ್ ಸಿ ಐವನ್ ಡಿಸೋಜ ಅವರು ಯಾವುದೇ ಕಾರಣಕ್ಕು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ.



ಶೀಘ್ರದಲ್ಲಿ ಗ್ಯಾರಂಟಿ ಆಫೀಸ್ ಗಳನ್ನು ತೆರೆಯಲಾಗುತ್ತದೆ ಎಂದು ತಿಳಿಸಿದರು.


ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಮಂಗಳೂರಿನಲ್ಲಿ ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾ ಹೇಳಿದರು.ಗ್ಯಾರಂಟಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಗ್ಯಾರಂಟಿ ಯೋಜನೆ ವಿಧಾನಸಭೆ ಚುನಾವಣೆಯಲ್ಲಿ ಜನರಿಗೆ ಕೊಟ್ಟಂತಹ ವಾಗ್ದಾನವಾಗಿದೆ ಎಂದರು.
ಯಾರಿಗೆ ಸಿಕ್ಕಿಲ್ಲವೋ ಅವರಿಗೆ ಹುಡುಕಿಕೊಡಲು ಗ್ಯಾರಂಟಿ ಸಮಿತಿ ರಚನೆ ಮಾಡಿದೆ. ಮುಂದೆ ಗ್ಯಾರಂಟಿ ಆಫೀ ಸಹ ಓಪನ್ ಆಗುತ್ತದೆ. ಅರ್ಹರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಕಚೇರಿ ಗ್ಯಾರಂಟಿ ಆಫೀಸ್ಗೆ ಬರಬಹುದು ಮನವಿ ಸಲ್ಲಿಸಿದರೆ ತಕ್ಷಣ ಸಮಸ್ಯೆ ಪರಿಹಾರ ಮಾಡಿಕೊಡಲಾಗುತ್ತದೆ. ಬಿಜೆಪಿಯವರಿಗೆ ಹೊಟ್ಟೆಕಿಚ್ಚು ಹೀಗಾಗಿ ಅವ ಪ್ರಚಾರ ಮಾಡುತ್ತಿದ್ದಾರೆ ಗ್ಯಾರೆಂಟಿ ಯೋಜನೆ ನಿಲ್ಲಿಸುತ್ತಾರೆ ಎಂಬ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮಂಗಳೂರಿನಲ್ಲಿ ಕಾಂಗ್ರೆಸ್ ಹೇಳಿಕೆ ನೀಡಿದರು.