Home ಕರಾವಳಿ ನರೇಂದ್ರ ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಪೇಜಾವರ ಸ್ವಾಮೀಜಿಗೆ ಆಹ್ವಾನ

ನರೇಂದ್ರ ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಪೇಜಾವರ ಸ್ವಾಮೀಜಿಗೆ ಆಹ್ವಾನ

0

ಉಡುಪಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿಯ ಪ್ರಮಾಣವಚನಕ್ಕೆ ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಭದ್ರತೆಯ ನಡುವೆ ಬಿರುಸಿನ ಸಿದ್ಧತೆಗಳು ನಡೆಯುತ್ತಿದ್ದು, ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಆಹ್ವಾನ ಲಭಿಸಿದ್ದು ಭಾನುವಾರ ದೆಹಲಿಗೆ ತೆರಳಲಿದ್ದಾರೆ.

ಶನಿವಾರ ತಡರಾತ್ರಿ ಪ್ರಧಾನ ಮಂತ್ರಿ ಕಚೇರಿಯಿಂದ ಪೇಜಾವರ ಸ್ವಾಮೀಜಿಗಳಿಗೆ ಆಹ್ವಾನ ನೀಡಲು ಫೋನ್ ಕರೆ ಬಂದಿದ್ದು, ಭಾನುವಾರ ಬೆಂಗಳೂರು ವಿಮಾನ ನಿಲ್ದಾಣದಿಂದ ಬೆಳಿಗ್ಗೆ 11.30ಕ್ಕೆ ನವದೆಹಲಿಗೆ ಪೇಜಾವರ ಸ್ವಾಮೀಜಿಗಳು ಹೊರಡಲಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.

ಪ್ರಮಾಣವಚನ ಕಾರ್ಯಕ್ರಮವು ರಾಷ್ಟ್ರಪತಿ ಭವನದ ಮುಂಭಾಗದ ಅಂಗಳದಲ್ಲಿ ಸಂಜೆ 7:15ಕ್ಕೆ ನಿಗದಿಯಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸಚಿವ ಸಂಪುಟ ಸದಸ್ಯರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ.

LEAVE A REPLY

Please enter your comment!
Please enter your name here