Home ತಾಜಾ ಸುದ್ದಿ ಇಂದು ಸಂಜೆ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ಸ್ವೀಕಾರ- ದೆಹಲಿಯಾದ್ಯಂತ ಭದ್ರತೆ

ಇಂದು ಸಂಜೆ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ಸ್ವೀಕಾರ- ದೆಹಲಿಯಾದ್ಯಂತ ಭದ್ರತೆ

0

ರೇಂದ್ರ ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನೆ ಶುರುವಾಗಿದೆ.. ರಾಷ್ಟ್ರಪತಿ ಭವನದಲ್ಲಿ ಸಂಜೆ 7:15ಕ್ಕೆ ಮೋದಿ ಅವರು ಐವರು ಸಚಿವರೊಂದಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಮೋ ಪಟ್ಟಾಭಿಷೇಕಕ್ಕೆ ದೇಶ-ವಿದೇಶಗಳಿಂದ ಗಣ್ಯಾತಿಗಣ್ಯರು ಆಗಮಿಸುತ್ತಿದ್ದಾರೆ.


ದೆಹಲಿಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಸರಿಯಾಗಿ 7:15 PM ಕ್ಕೆ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನ ಈ ಮಹತ್ತರ ಕಾರ್ಯಕ್ರಮಕ್ಕೆ ವೇದಿಕೆಯಾಗುತ್ತಿದೆ. ಸಾರ್ಕ್ ರಾಷ್ಟ್ರಗಳ ಮುಖ್ಯಸ್ಥರು, ಗಣ್ಯರು, ಪ್ರತಿನಿಧಿಗಳು ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುತ್ತಿದ್ದಾರೆ..

ಪ್ರಧಾನಿಯಾಗಿ ಮೋದಿ ಜತೆಗೆ ಇನ್ನೂ ಕೆಲವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಹಾಗೂ ಮಿತ್ರಪಕ್ಷಗಳ ತಲಾ ಐವರಿಗೆ ಸಚಿವ ಸಂಪುಟದಲ್ಲಿ ಅವಕಾಶ ಸಿಗಲಿದೆಯಂತೆ. ಆದರೆ, ಸಮ್ಮಿಶ್ರ ಸರ್ಕಾರ ಬಲವರ್ಧನೆಯ ನಂತರವೇ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗುವ ಸಾಧ್ಯತೆ ಇದೆ. ರಾಷ್ಟ್ರಪತಿ ಭವನದಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ಪೊಲೀಸ್ ಅಧಿಕಾರಿಗಳು ಸಿಸಿಟಿವಿ ಕ್ಯಾಮೆರಾಗಳು ಮತ್ತು ಡ್ರೋನ್‌ಗಳೊಂದಿಗೆ ಬಿಗಿ ಭದ್ರತೆ ಏರ್ಪಡಿಸಿದ್ದಾರೆ. ಭಾನುವಾರ ಮತ್ತು ಸೋಮವಾರ ಎರಡು ದಿನಗಳ ಕಾಲ ದೆಹಲಿಯನ್ನು ವಿಮಾನ ಹಾರಾಟ ನಿಷೇಧಿತ ವಲಯ ಎಂದು ಘೋಷಿಸಲಾಗಿದೆ.

ರಾಷ್ಟ್ರಪತಿ ಭವನದ ಒಳಗೆ ಮತ್ತು ಹೊರಗೆ ಮೂರು ಹಂತದ ಭದ್ರತೆಯನ್ನು ಏರ್ಪಡಿಸಲಾಗಿದೆ. ವಿದೇಶಿ ನಾಯಕರು ಮತ್ತು ಗಣ್ಯ ಅತಿಥಿಗಳು ತಂಗಿರುವ ಹೋಟೆಲ್ ಬಳಿ ಭದ್ರತೆಯನ್ನು ಬಲಪಡಿಸಲಾಗಿದೆ. ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ರಾಷ್ಟ್ರಪತಿ ಭವನ ಸಜ್ಜಾಗಿದೆ.

LEAVE A REPLY

Please enter your comment!
Please enter your name here