Home ತಾಜಾ ಸುದ್ದಿ ಈಶ್ವರನ ಹೆಸರಿನಲ್ಲಿ 3ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿ

ಈಶ್ವರನ ಹೆಸರಿನಲ್ಲಿ 3ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿ

0

ವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.


ಜವಾಹರಲಾಲ್ ನೆಹರು ನಂತರ ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ.

ನೆಹರು ಮೊದಲ ಬಾರಿಗೆ ನೇಮಕವಾಗಿದ್ದು, ನಂತರ ಎರಡು ಬಾರಿ ಚುನಾಯಿತರಾಗಿದ್ದರು. ಮೋದಿ ಸತತ ಮೂರು ಬಾರಿಗೆ ಚುನಾಯಿತರಾಗಿ ಪ್ರಧಾನಿ ಹುದ್ದೆಗೇರಿದ್ದಾರೆ.

ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರೊಂದಿಗೆ 72 ಸಚಿವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶ ವಿದೇಶಗಳ ಗಣ್ಯರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಪೇಜಾವರ ಶ್ರಿಗಳು, ಚಿನ್ನಜೀಯರ್ ಸ್ವಾಮಿಜಿ ಸೇರಿದಂತೆ ವಿವಿಧ ಸಾಧು ಸಂತರು, ಮಠಾಧೀಶರು ಕೂಡ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು.

ಉಪ ರಾಷ್ಟ್ರಪತಿ ಜಗದೀಪ್ ಧನಕರ್, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ನೇಪಾಳಿ ಪ್ರಧಾನಿ ಪುಷ್ಪ ಕಮಲ್ ದಹಲ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಮತ್ತು ಸೆಶೆಲ್ಸ್ ಉಪಾಧ್ಯಕ್ಷ ಅಹ್ಮದ್ ಅಫೀಫ್ ಅವರು ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here