ಕೊಪ್ಪಳ : ಬಕ್ರೀದ್ ಹಬ್ಬದ ಪ್ರಯುಕ್ತ ಕರೆದಿದ್ದ ಶಾಂತಿ ಸಭೆಯಲ್ಲಿ ಮುಸ್ಲಿಂ ಸಮಾಜದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಜಿಲ್ಲೆಯ ಗಂಗಾವತಿ ನಗರದ ಡಿವೈಎಸ್‌ಪಿ ಕಚೇರಿ ಆವರಣದಲ್ಲಿ ಶುಕ್ರವಾರ ನಡೆದಿದೆ.
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಾಮೂಹಿಕ ಪ್ರಾರ್ಥನೆ ವೇಳೆ ಯಾವುದೇ ರಾಜಕಾರಣಿಗಳು ಭಾಷಣ ಮಾಡಲು ಪೊಲೀಸ್ ಇಲಾಖೆ ಅವಕಾಶ ನೀಡಬಾರದು ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಆಪ್ತ ಅಲಿಖಾನ್ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರ ಆಪ್ತ ಹಾಗೂ ಕಾಂಗ್ರೆಸ್ ಮುಖಂಡ ಎಸ್. ಬಿ . ಖಾದ್ರಿ ಹಾಗೂ ಅವರ ಸಂಗಡಿಗರು ಅಲಿಖಾನ್ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಪರಸ್ಪರ ವಾಗ್ವಾದ ಉಂಟಾಗಿದೆ ಮಾರಾಮಾರಿ ನಡೆದಿದೆ.
ಡಿವೈಎಸ್ಪಿ ಸಿದ್ದಲಿಂಗನಗೌಡ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಮಧ್ಯಪ್ರವೇಶ ಮಾಡಿ ಎಲ್ಲರನ್ನೂ ಶಾಂತ ಗೊಳಿಸಿದರು. ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ ಯಾರು ಸಹ ವಾಗ್ವಾದ ಮಾತುಗಳ ನಾಡಬಾರದು ಎಂದು ಸೂಚನೆ ನೀಡಿದರು. ಶಾಂತಿ ಸಭೆಯನ್ನು ಮೊಟಕುಗೊಳಿಸಿ ಎಲ್ಲರನ್ನೂ ಮನೆಗೆ ಕಳಿಸಲಾಯಿತು.