Home ತಾಜಾ ಸುದ್ದಿ ಭಾರತದ 3 ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ

ಭಾರತದ 3 ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ

0

ಕೋಲ್ಕತ್ತಾ : ಜುಲೈ 1 ರಿಂದ ದೇಶದಲ್ಲಿ ಹೊಸ ಮೂರು ಕ್ರಿಮಿನಲ್‌ ಕಾನೂನುಗಳು ಜಾರಿಗೆ ಬರಲಿವೆ. ಐಪಿಸಿ, ಇಂಡಿಯನ್ ಎವಿಡೆನ್ಸ್ ಆಕ್ಟ್, ಕ್ರಿಮಿನಲ್ ಪ್ರೊಸೀಜರ್ ಕೋಡ್ ಜಾಗದಲ್ಲಿ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಎಂಬ ಮೂರು ಮಾದರಿ ಕಾನೂನುಗಳು ಜಾರಿಗೆ ಬರಲಿವೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ತಿಳಿಸಿದ್ದಾರೆ. ಇದೇ ವೇಳೆ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಜಾರಿಗೊಳಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿದ್ದು, ಅವುಗಳ ಅನುಷ್ಠಾನಕ್ಕೆ ಅಗತ್ಯ ತರಬೇತಿ ಈಗಾಗಲೇ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.


LEAVE A REPLY

Please enter your comment!
Please enter your name here