Home ಕರಾವಳಿ ಎಡಪದವು ಮಹಾ ಶಕ್ತಿ ಕೇಂದ್ರದ ವತಿಯಿಂದ ಹತ್ತನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಎಡಪದವು ಮಹಾ ಶಕ್ತಿ ಕೇಂದ್ರದ ವತಿಯಿಂದ ಹತ್ತನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ಭಾರತೀಯ ಜನತಾ ಪಾರ್ಟಿ ಎಡಪದವು ಮಹಾ ಶಕ್ತಿ ಕೇಂದ್ರದ ವತಿಯಿಂದ 10 ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ದಿನಾಚರಣೆಯನ್ನು ಶ್ರೀ ನಾರಾಯಣ ಗುರು ಸಭಾ ಭವನ ಕುಪ್ಪೆಪದವು ಇಲ್ಲಿ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಎಡಪದವು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಮಹಾಬಲ ಸಾಲ್ಯಾನ್ ಇವರು ಮಾತನಾಡಿ ಯೋಗವು ನಮ್ಮ ಆರೋಗ್ಯವನ್ನು ಮಾತ್ರವಲ್ಲದೆ ನಮ್ಮ ಏಕಾಗ್ರತೆಗೆ ತುಂಬಾ ಅನುಕೂಲವಾದ ವಾತವರಣವನ್ನು ಕಲ್ಪಿಸುತ್ತದೆ . ಯೋಗವು ನಮ್ಮ ದೇಶದಲ್ಲಿ ಪ್ರಾರಂಭವಾಗಿ ಇದೀಗ ವಿಶ್ವದಾದ್ಯಂತ ಪಸರಿಸಿ ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ನುಡಿದರು.

SPYSS ನ ಯೋಗ ಶಿಕ್ಷಕರಾದ ರಿತೇಶ್ ಅಟ್ಟೆಪದವು ಇವರು ಯೋಗ ಶಿಬಿರ ನಡೆಸಿಕೊಟ್ಟು ಮಾತನಾಡಿ ನಮ್ಮ ದೇಶದ ಪ್ರಧಾನಿ ಮಾನ್ಯ ಶ್ರೀ ನರೇಂದ್ರ ಮೋದಿಯವರ ಕಾರ್ಯವೈಕರಿಯಿಂದಾಗಿ ಯೋಗ ದಿನವು ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲ್ಪಡುತ್ತದೆ ಎಂದರು . ಈ ಸಂದರ್ಭದಲ್ಲಿ ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ , ಉಪಾಧ್ಯಕ್ಷೆ ಸುಶ್ಮಾ , ಸದಸ್ಯರಾದ ಸತೀಶ್ ಪೂಜಾರಿ ಬಳ್ಳಾಜೆ , ಉತ್ತರ ಮಂಡಲದ ಯುವ ಮೋರ್ಚಾದ ಉಪಾಧ್ಯಕ್ಷ ಸಂತೋಷ್ ಆಳ್ವ ಹಾಗೂ ಯೋಗ ಪಟುಗಳು ಉಪಸ್ಥಿತರಿದ್ದರು .

LEAVE A REPLY

Please enter your comment!
Please enter your name here