ಲಂಚ ಸ್ವೀಕರಿಸುವ ವೇಳೆ ಸರ್ಕಾರಿ ಮಹಿಳಾ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಲೋಕಾಯುಕ್ತ ಅಧಿಕಾರಿಗಳು ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುವ ಎಸ್ಡಿಎ ಹಾಗೂ ಕಂದಾಯ ಅಧಿಕಾರಿಯನ್ನು ಬಂಧಿಸಿದ್ದಾರೆ. ಮಹಾನಗರ ಪಾಲಿಕೆ SDA ಅಧಿಕಾರಿ ಲಕ್ಕಪ್ಪ, ಕಂದಾಯ ಇಲಾಖೆ ಅಧಿಕಾರಿ ಅನ್ನಪೂರ್ಣ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದು, ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರಿಸಿದ್ದಾರೆ.
ಚಂದ್ರಶೇಖರ್ ಎಂಬುವರು ಹಿಟ್ಟಿನ ಗೀರಣಿ ಮನೆಯ ಇ-ಸ್ವತ್ತು ಪಡೆಯಲು ಹೋದ ವೇಳೆ 15 ಸಾವಿರ ರೂಪಾಯಿ ಹಣಕ್ಕೆ ಅಧಿಕಾರಿಗಳು ಬೇಡಿಕೆ ಇಟ್ಟಿದ್ದರಂತೆ.
ಮೊದಲು ಮಹಾನಗರ ಪಾಲಿಕೆ SDA ಅಧಿಕಾರಿದ್ದ ಲಕ್ಕಪ್ಪ 15 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಇತ್ತ ಲಂಚದ ಹಣ ಪಡೆಯುವಾಗ ಕಂದಾಯ ಅಧಿಕಾರಿ ಅನ್ನಪೂರ್ಣ 15 ಸಾವಿರ ಕಡಿಮೆಯಾಗುತ್ತೆ 25 ಸಾವಿರ ಕೋಡಿ ಅಂತ ಮತ್ತೊಂದು ಬೇಡಿಕೆ ಇಟ್ಟಿದ್ದರಂತೆ.
ಈ ಕುರಿತಂತೆ ಚಂದ್ರಶೇಖರ್ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಅನ್ವಯ ಲೋಕಾಯುಕ್ತ ಎಸ್ ಪಿ ಎಂಎಸ್ ಕೌಲಾಪೂರೆ ನೇತೃತ್ವದಲ್ಲಿ ದಾಳಿ ನಡೆಸಿ, ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರೂ ಅಧಿಕಾರಿಗಳನ್ನ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.