Home ಕರಾವಳಿ ಮಂಗಳೂರು ವಕೀಲರ ಸಂಘದ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮ: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತು,...

ಮಂಗಳೂರು ವಕೀಲರ ಸಂಘದ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮ: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತು, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜರಿಂದ ಭರವಸೆ

0

ಮಂಗಳೂರು ವಕೀಲರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ದಿನಾಂಕ 21/06/2024 ಶುಕ್ರವಾರದಂದು ಜಿಲ್ಲಾ ನ್ಯಾಯಾಲಯದ ಸಂಕೀರ್ಣ ದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದಂತಹ ಶ್ರೀ ರವೀಂದ್ರ ಎಂ ಜೋಶಿ ವಹಿಸಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ವಕೀಲರ ಸಂಘದ ಸದಸ್ಯರು ಹಾಗೂ ವಿಧಾನಪರಿಷತ್ ಸದಸ್ಯರಾದ ಶ್ರೀ ಐವನ್ ಡಿಸೋಜ ರವರು ನೆರವೇರಿಸಿದರು, ಈ ಸಂದರ್ಭದಲ್ಲಿ ಮಂಗಳೂರು ವಕೀಲ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಪೃಥ್ವಿರಾಜ್ ರೈ ಅವರು ನೂತನ ಸಮಿತಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜರವರು ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಶ್ರಮಿಸುವುದಾಗಿ ಮಂಗಳೂರು ವಕೀಲರ ಸಂಘದ ಎಲ್ಲಾ ಅಭಿವೃದ್ಧಿ ಕಾರ್ಯಗಳಲ್ಲಿ ಕೈಜೋಡಿಸುವುದಾಗಿಯೂ ಹೇಳಿ ಮಂಗಳೂರು ವಕೀಲರ ಸಂಘಕ್ಕೆ ಶಾಸಕರ ಅನುದಾನದಿಂದ 10 ಲಕ್ಷ ಘೋಷಿಸಿರುತ್ತಾರೆ. ಈ ಸಂದರ್ಭದಲ್ಲಿ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮ ನಡೆಯಿತು, ಸಂಘದ ಉಪಾಧ್ಯಕ್ಷರಾದ ಸುಜಿತ್ ಕುಮಾರ್, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಜ್ಯೋತಿ ಸಭೆಯಲ್ಲಿ ಉಪಸ್ಥಿತರಿದ್ದರು, ಮಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಎಚ್ ವಿ ಅವರು ಸ್ವಾಗತವನ್ನು ಕೋರಿದರು, ಪ್ರಧಾನ ಕಾರ್ಯದರ್ಶಿಯಾದ ಶ್ರೀಧರ್ ಎಚ್ ಅವರು ವಂದನೆಯನ್ನು ಸಲ್ಲಿಸಿದರು, ಕಾರ್ಯಕ್ರಮದ ನಿರೂಪಣೆಯನ್ನು ಮಂಗಳೂರು ವಕೀಲರ ಸಂಘದ ಹಿರಿಯ ಸಮಿತಿಯ ಸದಸ್ಯರಾದ ಶ್ರೀಮತಿ ಆಶಾ ನಾಯಕ್ ರವರು ನೆರವೇರಿಸಿದರು.

LEAVE A REPLY

Please enter your comment!
Please enter your name here