ಮಡಿಕೇರಿ: ಕೋಟೆಬೆಟ್ಟ ಪ್ರವಾಸಕ್ಕೆಂದು ಆಗಮಿಸಿದ ಪ್ರವಾಸಿಗರ ಮೇಲೆ ಬೈಕಿನಲ್ಲಿ ಬಂದ ಇಬ್ಬರು ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಮಕ್ಕಳು, ಮಹಿಳೆಯರು ಸೇರಿದಂತೆ ಪುತ್ತೂರಿನಿಂದ ಕುಟುಂಬವೊಂದು ಕೋಟೆಬೆಟ್ಟ ಪ್ರವಾಸಿ ತಾಣಕ್ಕೆ ಆಗಮಿಸಿದ್ದರು.



ಈ ವೇಳೆ ಬೈಕಿನಲ್ಲಿ ಬಂದ ಇಬ್ಬರು ಪುಂಡರು ಹಲ್ಲೆ ನಡೆಸಿದ್ದಾರೆ. ಅದಾದ ಬಳಿಕ ಚಿನ್ನದ ಸರ ಎಗರಿಸಿ ಬೈಕನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳಿಬ್ಬರು ಮಾದಾಪುರ ಸಮೀಪದ ನಿವಾಸಿಗಳೆಂಬ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳು ಪ್ರವಾಸಿಗರ ಮೇಲೆ ಹೆಲ್ಮೆಟ್ನಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ದೌರ್ಜನ್ಯಕ್ಕೆ ಒಳಗಾದವರು ಮಾದಾಪುರ ಉಪ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ಸೋಮವಾರಪೇಟೆ ಪೊಲೀಸ್ ಠಾಣಾ ಮೆಟ್ಟಿಲೇರಿದೆ.

