ಕಾಸರಗೋಡು: ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ಸಿದ್ಧವಿನಾಯಕ ದೇವಸ್ಥಾನ ಜಲಾವೃತಗೊಂಡಿದೆ. ಬುಧವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಇಲ್ಲಿನ ಮಧುವಾಹಿನಿ ನದಿ ತುಂಬಿ ಹರಿಯುತ್ತಿದ್ದು ದೇವಸ್ಥಾನದ ಒಳಭಾಗ ಜಲಾವೃತಗೊಂಡಿದ್ದು ನಾಲ್ಕೈದು ಅಡಿ ನೀರು ತುಂಬಿಕೊಂಡಿದೆ.
ಪ್ರತೀ ವರ್ಷ ಮಳೆಗಾಲದ ಸಂದರ್ಭದಲ್ಲಿ ದೇವಸ್ಥಾನ ಸುತ್ತಮುತ್ತಲ ಪ್ರದೇಶ ಜಲಾವೃತವಾಗುತ್ತಿದ್ದು, ದ್ವೀಪದಂತೆ ಗೋಚರವಾಗುತ್ತಿದೆ. ಜಿಲ್ಲೆಯಾಧ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.