Home ಕರಾವಳಿ ಉಳ್ಳಾಲ: ಕಡಲಬ್ಬರಕ್ಕೆ ಸಮುದ್ರಪಾಲಾದ ಮನೆ.!

ಉಳ್ಳಾಲ: ಕಡಲಬ್ಬರಕ್ಕೆ ಸಮುದ್ರಪಾಲಾದ ಮನೆ.!

0

ಉಳ್ಳಾಲ:ಕರಾವಳಿಯಲ್ಲಿ ಭಾರೀ ಮಳೆಗೆ ಕಡಲ್ಕೊರೆತ ತೀವ್ರವಾಗಿದ್ದು, ಉಚ್ಚಿಲ ಬಟ್ಟಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದ, ಗುರುವಾರ ಮನೆಯೊಂದು ಸಮುದ್ರಪಾಲಾಗಿದೆ. ಸೋಮೇಶ್ವರ ಪುರಸಭೆ ಅಧಿಕಾರಿಗಳು ಸ್ಥಳಾಂತರಗೊಳಿಸಿದ್ದ ಬೀಫಾತುಮ್ಮ ಮನೆ ಗುರುವಾರ ಸಂಜೆ ವೇಳೆ ಸಂಪೂರ್ಣ ಸಮುದ್ರಪಾಲಾಗಿದೆ. ಅಪಾಯದಲ್ಲಿರುವ ಇನ್ನೆರಡು ಮನೆಮಂದಿಯನ್ನು ಇಂದು ಸ್ಥಳಾಂತರಿಸಲಾಗಿದೆ.


ಮದನಿ ನಗರದಲ್ಲಿ ಸಂಭವಿಸಿದ ಘೋರ ದುರಂತದ ಹಿನ್ನೆಲೆಯಲ್ಲಿ ಇನ್ನೊಂದು ದುರಂತ ಸಂಭವಿಸದಿರಲಿ ಎಂಬ ಕಾರಣದಿಂದ ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮತ್ತಾಡಿ, ತಹಶೀಲ್ದಾರ್ ಪ್ರದೀಪ್ ಕೋರ್ಡೇಕರ್ ಸಹಿತ ಹಲವು ಅಧಿಕಾರಿಗಳು ಜೂ.26 ಕ್ಕೆ ಉಚ್ಚಿಲ ಬಟ್ಟಪ್ಪಾಡಿಗೆ ತೆರಳಿ ಬೀಫಾತುಮ್ಮ ಮನೆಯ ಐದು ಮಂದಿಯನ್ನು ಸ್ಥಳಾಂತರಿಸಿದ್ದರು.

ಅವರು ಸಂಬಂಧಿಕರ ಮನೆಗೆ ತೆರಳಿ ಇಂದು ಕೋಟೆಕಾರಿನಲ್ಲಿರುವ ಬಾಡಿಗೆ ಮನೆಗೆ ತೆರಳಿದ್ದಾರೆ. ಈ ಬಾಡಿಗೆ ಮನೆಯ ಮೂರು ತಿಂಗಳ ಬಾಡಿಗೆ ಸರಕಾರ ಭರಿಸಲಿದೆ. ಇಂದು ಬೀಫಾತುಮ್ಮ ಮನೆ ಸಮುದ್ರಪಾಲಾಗುತ್ತಿದ್ದಂತೆ ಅಲಿಮಮ್ಮ ಕುಟುಂಬದ 11 ಮಂದಿ ಹಾಗೂ ಸೌದಾ ಎಂಬವರ ಮನೆಯ 6 ಮಂದಿಯನ್ನು ಅವರ ಸಂಬಂಧಿಕರ ಮನೆಗೆ ಸ್ಥಳಾಂತರಗೊಳಿಸಲಾಗಿದೆ. ಅವರು ಸ್ಥಳಾಂತರಗೊಂಡ ಮರುದಿನವೇ ಅವರ ಮನೆ ಕಡಲ್ಕೊರೆತ ಹೊಡೆತಕ್ಕೆ ಧರಾಶಾಯಿಯಾಗಿದೆ.

LEAVE A REPLY

Please enter your comment!
Please enter your name here