Home ತಾಜಾ ಸುದ್ದಿ ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್..!

ವಿಜಯ್ ಮಲ್ಯ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್..!

0

ನವದೆಹಲಿ: ಉದ್ಯಮಿ ವಿಜಯ್ ಮಲ್ಯ ವಿರುದ್ಧ ಮುಂಬೈ ಸಿಬಿಐ ವಿಶೇಷ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿ ತೀರ್ಪು ನೀಡಿದೆ.


2007-2012ರ ಅವಧಿಯಲ್ಲಿ ವಿಜಯ್ ಮಲ್ಯ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಿಂದ ಲೋನ್ ಪಡೆದಿದ್ದು, ಸಾಲ ಮರುಪಾವತಿ ಮಾಡಿರಲಿಲ್ಲ. ಮಲ್ಯ ಅವರು 180 ಕೋಟಿ ರೂ. ಸಾಲ ಪಡೆದಿದ್ದರು. ಅದನ್ನು ಮರುಪಾವತಿ ಮಾಡಿಲ್ಲ. ಇದೀಗ ವಿಜಯ್ ಮಲ್ಯ ಅವರು ಬ್ಯಾಂಕ್ ಗೆ ಸಾಲ ಮರು ಪಾವತಿಸದ ಕಾರಣಕ್ಕಾಗಿ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಯ ಸೇರಿ 10 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದೀಗ ವಿಜಯ್ ಮಲ್ಯಗೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಲಾಗಿದ್ದು, ಬಾಕಿ ಉಳಿದ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಲಾಗಿದೆ.

LEAVE A REPLY

Please enter your comment!
Please enter your name here