Home ತಾಜಾ ಸುದ್ದಿ ಲೋನಾವಾಲಾ ಜಲಪಾತ ದುರಂತ: ಕೊಚ್ಚಿ ಹೋಗಿದ್ದ ಐವರ ಮೃತದೇಹ ಪತ್ತೆ..!

ಲೋನಾವಾಲಾ ಜಲಪಾತ ದುರಂತ: ಕೊಚ್ಚಿ ಹೋಗಿದ್ದ ಐವರ ಮೃತದೇಹ ಪತ್ತೆ..!

0

ಪುಣೆ : ಮಹಾರಾಷ್ಟ್ರದ ಲೋನಾವಾಲಾದಲ್ಲಿ ಭಾನುವಾರ ನಿರಂತರ ಮಳೆಯಿಂದಾಗಿ ಭೂಶಿ ಅಣೆಕಟ್ಟು ಉಕ್ಕಿ ಹರಿದ ಪರಿಣಾಮ ನಾಲ್ಕು ಮಕ್ಕಳು ಸೇರಿದಂತೆ ಕನಿಷ್ಠ ಐದು ಜನರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಇದೀಗ ಐವರ ಮೃತದೇಹಗಳು ಪತ್ತೆಯಾಗಿವೆ.

ಭಾನುವಾರ ಮಧ್ಯಾಹ್ನ 1:30 ಕ್ಕೆ ಈ ಘಟನೆ ನಡೆದಿದ್ದು, ನಂತರ ಶೋಧ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದವು.

2 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಎಲ್ಲಾ ಐದು ಜನರು ಪುಣೆ ಸಯ್ಯದ್ ನಗರಕ್ಕೆ ಸೇರಿದ ಒಂದೇ ಕುಟುಂಬಕ್ಕೆ ಸೇರಿದವರು ಎಂದು ಪುಣೆ ಎಸ್ಪಿ ಪಂಕಜ್ ದೇಶ್ಮುಖ್ ತಿಳಿಸಿದ್ದಾರೆ.

ನಾವು 40 ವರ್ಷದ ಮಹಿಳೆ ಮತ್ತು 13 ವರ್ಷದ ಬಾಲಕಿಯ ಶವ 6 ವರ್ಷದ ಇಬ್ಬರು ಬಾಲಕಿಯರು ಮತ್ತು 4 ವರ್ಷದ ಬಾಲಕನ ಶವಗಳನ್ನು ಪತ್ತೆಹಚ್ಚಲಾಗಿದೆ. ಅವರು ಒಂದೇ ಕುಟುಂಬದವರಾಗಿದ್ದಾರೆ ಮತ್ತು ಭೂಶಿ ಅಣೆಕಟ್ಟಿನಿಂದ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿರುವ ಜಲಪಾತಕ್ಕೆ ಜಾರಿ ಕೆಳಭಾಗದ ಜಲಾಶಯದಲ್ಲಿ ಮುಳುಗಿದರು” ಎಂದು ದೇಶ್ಮುಖ್ ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here