Home ತಾಜಾ ಸುದ್ದಿ ‘ಮುಡಾ’ ಅಕ್ರಮ ಆರೋಪ : ನಾಳೆ ಮುಖ್ಯಮಂತ್ರಿ ನಿವಾಸಕ್ಕೆ ಬಿಜೆಪಿ ಮುತ್ತಿಗೆ : ಶಾಸಕ ಸುನೀಲ್...

‘ಮುಡಾ’ ಅಕ್ರಮ ಆರೋಪ : ನಾಳೆ ಮುಖ್ಯಮಂತ್ರಿ ನಿವಾಸಕ್ಕೆ ಬಿಜೆಪಿ ಮುತ್ತಿಗೆ : ಶಾಸಕ ಸುನೀಲ್ ಕುಮಾರ್ ಹೇಳಿಕೆ

0

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟುಗಳ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಅದರಲ್ಲೂ ಮುಖ್ಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೂ ಸೈಟ್​ ಹಂಚಿಕೆ ಮಾಲಾಗಿದ್ದು, ಈ ಕುರಿತು ಬಿಜೆಪಿ ಶಾಸಕ ಸುನೀಲ್ ಕುಮಾರ ಪ್ರತಿಕ್ರಿಯಿಸಿದ್ದು, ನಾಳೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ತಿಳಿಸಿದರು.

 ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಸುನೀಲ್ ಕುಮಾರ್ ಮಾತನಾಡಿ, ಒಂದು ವರ್ಷದಲ್ಲೇ ಹಗರಣ ಮೇಲೆ‌ ಹಗರಣ ಬಯಲಿಗೆ ಬರುತ್ತಿದೆ. ವಾಲ್ಮೀಕಿ ‌ನಿಗಮ ಹಗರಣ ಬೆನ್ನಲ್ಲೇ ‌ಮುಡಾದಲ್ಲಿ ಹಗರಣ ಬಯಲಿಗೆ. ಸಿಎಂ ಉಸ್ತುವಾರಿ ‌ಜಿಲ್ಲೆಯಲ್ಲಿ‌ ಹಗರಣ ಆಗಿದ್ರೂ ಸುಮ್ಮನಿದ್ದಾರೆ. ಒಂದು ರೀತಿಯಲ್ಲಿ ಅವರ ಮನೆ ಬಾಗಿಲಲ್ಲೇ ನಡೆದಿರುವ ಹಗರಣ ಎಂದು ತಿಳಿಸಿದರು.

ಸಿಎಂ ಕುಟುಂಬ ಸದಸ್ಯರಿಗೆ ಸೈಟ್ ಹಂಚಿಕೆ ಆಗಿದ್ದು ವರದಿಯಲ್ಲಿ ಸ್ಪಷ್ಟವಾಗಿದೆ. ರಾಜ್ಯದಲ್ಲಿರೋದು ಶೂನ್ಯ ಅಭಿವೃದ್ಧಿ ಸರ್ಕಾರ. ಅಧಿವೇಶನದಲ್ಲಿ ಹಗರಣದ ಬಗ್ಗೆ ಪ್ರಸ್ತಾಪಿಸ್ತೇವೆ. ಆರೋಪ ಬಂತಂದ್ರೆ ಕೇವಲ ವರ್ಗಾವಣೆ ಮಾಡೋದು ಅಷ್ಟೇ ಆಗುತ್ತಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮುಚ್ಚಿಹಾಕುವ ಯತ್ನ ನಡೆಯುತ್ತಿದೆ. ನಾಳೆ ಪ್ರತಿಭಟನೆ ಮಾಡಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದರು.

LEAVE A REPLY

Please enter your comment!
Please enter your name here