Home ಕರಾವಳಿ ಪುತ್ತೂರು: ತಾಲೂಕು ಕಚೇರಿಯಲ್ಲಿ ಆಧಾರ್ ಕೇಂದ್ರ ಉದ್ಘಾಟನೆ

ಪುತ್ತೂರು: ತಾಲೂಕು ಕಚೇರಿಯಲ್ಲಿ ಆಧಾರ್ ಕೇಂದ್ರ ಉದ್ಘಾಟನೆ

0

ಪುತ್ತೂರು: ಪುತ್ತೂರಿನ ತಾಲೂಕು ಕಚೇರಿಯಲ್ಲಿ ಆಧಾರ್ ಕೇಂದ್ರವನ್ನು ತೆರೆಯಲಾಗಿದೆ. ಆಧಾರ್ ಕಾರ್ಡು ಮಾಡಿಸಲು ಬೆಳಿಗ್ಗೆ 5 ಗಂಟೆಗೆ ಎದ್ದು ಅಂಚೆ ಕಚೇರಿ ಮುಂದೆ ಇನ್ನು ಕ್ಯೂ ನಿಲ್ಲುವ ಅಗತ್ಯವಿಲ್ಲ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.


ಪುತ್ತೂರು ತಾಲೂಕು ಕಚೇರಿಯಲ್ಲಿ ನೂತನ ಆಧಾರ್ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನೂತನ ಕೇಂದ್ರದಲ್ಲಿ 18 ವರ್ಷ ಪ್ರಾಯದವರೆಗಿನ ಮಕ್ಕಳಿಗೆ ಹೊಸ ಆಧಾರ್ ,18 ರ ನಂತರದವರ ಆದಾರ್ ತಿದ್ದುಪಡಿ. ನಂಬರ್ ತಿದ್ದುಪಡಿ, ವಿಳಾಸ ತಿದ್ದುಪಡಿ ಸೇರಿದಂತೆ ತಿದ್ದುಪಡಿ‌ಮಾಡಲು ಅವಕಾಶವಿದೆ. ವಾರದ ರಜಾ ದಿನ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಕೇಂದ್ರ ಕಾರ್ಯಾಚರಿಸಲಿದೆ. ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು‌ ಎಂದು ಹೇಳಿದರು.

ತಹಶಿಲ್ದಾರ್ ಪುರಂದರ್ ಹೆಗ್ಡೆ,ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ,ಕೆಪಿಸಿಸಿ ಸಂಯೋಜಕರಾದ ಚಂದ್ರಹಾಸ ಶೆಟ್ಟಿ, ಬ್ಲಾಕ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here