Home ಕರಾವಳಿ ಮಂಗಳೂರು: ಭಾರೀ ಮಳೆ ಹಿನ್ನೆಲೆ ಮಂಗಳೂರಿನ ಶಾಲೆ -ಕಾಲೇಜಿಗೆ ಇಂದು ರಜೆ

ಮಂಗಳೂರು: ಭಾರೀ ಮಳೆ ಹಿನ್ನೆಲೆ ಮಂಗಳೂರಿನ ಶಾಲೆ -ಕಾಲೇಜಿಗೆ ಇಂದು ರಜೆ

0

ಮಂಗಳೂರು: ನಗರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಎಲ್ಲಾ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ದ.ಕ.ಜಿಲ್ಲಾಧಿಕಾರಿ ಸೋಮವಾರವೂ ರಜೆ ಘೋಷಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮಂಗಳೂರು ತಾಲೂಕಿನಲ್ಲಿ ವ್ಯಾಪಕ ಮಳೆ ಮುಂದುವರಿದಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ ತರಗತಿಗಳಿಗೆ ಸೋಮವಾರವೂ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಭಾರೀ ಮಳೆ ಹಿನ್ನೆಲೆ ಶನಿವಾರವೂ ರಜೆ ಘೋಷಿಸಲಾಗಿತ್ತು

LEAVE A REPLY

Please enter your comment!
Please enter your name here