Home ಕರಾವಳಿ ಉಡುಪಿ : ಮಗಳನ್ನು ಶಾಲೆಗೆ ಬಿಟ್ಟು ಬಂದು ತಂದೆ ಆತ್ಮಹತ್ಯೆ..!

ಉಡುಪಿ : ಮಗಳನ್ನು ಶಾಲೆಗೆ ಬಿಟ್ಟು ಬಂದು ತಂದೆ ಆತ್ಮಹತ್ಯೆ..!

0

ಉದ್ಯಾವರ : ವೈಯುಕ್ತಿಕ ಕಾರಣಗಳಿಂದ ಮನನೊಂದು ಉದ್ಯಾವರ ಬೋಳಾರ್ ಗುಡ್ಡೆಯ ಆಟೋ ಟೆಂಪೋ ಚಾಲಕ / ಮಾಲಕ ಮಹೇಶ್ ಪಾಲನ್ (35) ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮದಾಸ್ ಪಾಲನ್ ಪುತ್ರನಾಗಿರುವ ಮಹೇಶ್ (ಮಾಹಿ), ಇಂದು ಬೆಳಿಗ್ಗೆ ಮೂರನೇ ತರಗತಿಯಲ್ಲಿ ಇರುವ ಪುತ್ರಿಯನ್ನು ಶಾಲೆಗೆ ಬಿಟ್ಟು ಬಂದಿದ್ದು, ಬಳಿಕ ಮನೆ ಸಮೀಪದಲ್ಲಿರುವ ಕಟ್ಟಿಗೆ ತುಂಬಿರುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹೇಶ್ ಉದ್ಯಾವರ ಗುಡ್ಡೆಯಂಗಡಿಯಲ್ಲಿ ಟೆಂಪೋರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು. ಬಿಲ್ಲವ ಮಹಾಜನ ಸಂಘ, ಉದ್ಯಾವರ ಯುವಕ ಮಂಡಲ ಮತ್ತು ಗುಡ್ಡೆಯಂಗಡಿ ಫ್ರೆಂಡ್ಸ್ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ತಂದೆ ಆಂಬುಲೆನ್ಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೃತ ಮಹೇಶ್ ತಂದೆ ತಾಯಿ, ಇಬ್ಬರು ಸಹೋದರರು, ಪತ್ನಿ, ಪುತ್ರಿ ಸಹಿತ ಬಂದು ಬಳಗದವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here